ಸುಳ್ಯ: ಜೂ. 18ರಂದು ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟನೆ ನೆರವೇರಿಸಲಿರುವ ನೂತನ ಕಛೇರಿಗಳಿಗೆ ಭೇಟಿ ನೀಡಿ ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಉದ್ಘಾಟನೆ ಕಾರ್ಯಕ್ರಮಗಳ ರೂಪುರೇಷೆಗಳ ಕುರಿತು
ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು.ಅರಂಬೂರಿನ ಸಾಮಾಜಿಕ ಅರಣ್ಯ ಇಲಾಖೆಯ ನೂತನ ಕಛೇರಿ, ನಗರ ಪಂಚಾಯತ್ನಲ್ಲಿ ಉದ್ಘಾಟನೆಗೊಳ್ಳಲಿರುವ ಸುಳ್ಯ ನಗರ ಯೋಜನಾ ಪ್ರಾಧಿಕಾರದ ನೂತನ ಕಛೇರಿಗೆ ಭೇಟಿ ನೀಡಿ ಉದ್ಘಾಟನಾ ಕಾರ್ಯಕ್ರಮಗಳ ರೂಪುರೇಷೆಗಳ ಕುರಿತು ಚರ್ಚೆ ನಡೆಸಲಾಯಿತು. ಈ ಸಂದರ್ಭದಲ್ಲಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ.ಮುಸ್ತಫ, ಮುಖ್ಯಾಧಿಕಾರಿ ಸುಧಾಕರ ಎಂ.ಎಚ್. ಮತ್ತಿತರರು ಉಪಸ್ಥಿತರಿದ್ದರು.
ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ, ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯ ಭವಾನಿಶಂಕರ್ ಕಲ್ಮಡ್ಕ, ನಗರ ಪಂಚಾಯತ್ ಮಾಜಿ ಉಪಾಧ್ಯಕ್ಷ ಗೋಕುಲ್ ದಾಸ್ ಸುಳ್ಯ, ರವಿಕುಮಾರ್ ಕಿರಿಭಾಗ, ಆಲೆಟ್ಟಿ ಗ್ರಾಮ ಪಂಚಾಯತ್ ಸದಸ್ಯರಾದ ಸತ್ಯ ಕುಮಾರ್ ಆಡಿಂಜ ಮೊದಲಾದವರು ಉಪಸ್ಥಿತರಿದ್ದರು.