ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ 8 ಕ್ಷೇತ್ರಗಳಲ್ಲಿ 6 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ.
ಸುಳ್ಯದಲ್ಲಿ ಭಾಗೀರಥಿ ಮುರುಳ್ಯ, ಬೆಳ್ತಂಗಡಿಯಲ್ಲಿ ಹರೀಶ್ ಪೂಂಜ, ಬಂಟ್ವಾಳದಲ್ಲಿ ರಾಜೇಶ್ ನಾಯ್ಕ್, ಮಂಗಳೂರು ದಕ್ಷಿಣದಲ್ಲಿ ವೇದವ್ಯಾಸ ಕಾಮತ್, ಮಂಗಳೂರು ಉತ್ತರದಲ್ಲಿ ಭರತ್ ಶೆಟ್ಟಿ,ಮೂಡಬಿದ್ರೆಯಲ್ಲಿ ಉಮಾನಾಥ ಕೋಟ್ಯಾನ್ ಮುನ್ನಡೆ ಕಾಯ್ದುಕೊಂಡರೆ, ಮಂಗಳೂರು ನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯು.ಟಿ.ಖಾದರ್ ಮುನ್ನಡೆ ಪಡೆದಿದ್ದಾರೆ. ಪುತ್ತೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಹಾಗೂ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಮಧ್ಯೆ ತೀವ್ರ ಸ್ಪರ್ಧೆ ಏರ್ಪಟ್ಟಿದೆ. ಇಲ್ಲಿ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಮೂರನೇ ಸ್ಥಾನದಲ್ಲಿದ್ದಾರೆ