ಸುಳ್ಯ:ದ.ಕ .ಜಿಲ್ಲೆಯ ಉಸ್ತುವಾರಿ ಹಾಗೂ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಮಧುಬಂಗಾರಪ್ಪ ದ.ಕ.ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿಯ ಆಯ್ಕೆ ಸಂಬಂಧಪಟ್ಟು ಡಿ. 2 ರಂದು ಮಲ್ಲಿಕಟ್ಟೆ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರ – ಕಾರ್ಯಕರ್ತರ ಅಭಿಪ್ರಾಯ ಸಂಗ್ರಹ ನಡೆಸಿದರು. ಸುಳ್ಯದ ಕಾಂಗ್ರೆಸ್ ಮುಖಂಡರು
ಅಭಿಪ್ರಾಯ ನೀಡಿದರು. ಕೆಪಿಸಿಸಿ ವಕ್ತಾರ ಟಿ. ಎಂ. ಶಾಹಿದ್ ತೆಕ್ಕಿಲ್, ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಕೆ.ಎಂ. ಮುಸ್ತಾಫಾ, ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ, ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ, ಪ್ರಮುಖರಾದ ಶರೀಫ್ ಕಂಠಿ,
ಮಹೇಶ್ ಕುಮಾರ್ ಕರಿಕ್ಕಳ, ಭವಾನಿಶಂಕರ್ ಕಲ್ಮಡ್ಕ, ನಂದರಾಜ್ ಸಂಕೇಶ, ಮಹಮ್ಮದ್ ಫವಾಜ್, ಚೇತನ್ ಕಜೆಗದ್ದೆ ಮತ್ತಿತರರು ಭಾಗವಹಿಸಿ ಪ್ರಸ್ತುತ ಯಾರಿಗೆ ಟಿಕೆಟ್ ನೀಡಬೇಕು ಹಾಗೂ ಜಿಲ್ಲೆಯ ಸಮಗ್ರ ವಿಚಾರಗಳನ್ನು ಉಸ್ತುವಾರಿ ಮಧುಬಂಗಾರಪ್ಪ ಅವರ ಗಮನಕ್ಕೆ ತಂದು ತಮ್ಮ ಅಭಿಪ್ರಾಯ ಮಂಡಿಸಿದರು.












