ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಂಯುಕ್ತಾಶ್ರಯದಲ್ಲಿ 2026-27ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕು ಮಟ್ಟ ಮತ್ತು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳನ್ನು ಪುರುಷ ಮತ್ತು ಮಹಿಳೆಯರಿಗಾಗಿ ಆಯೋಜಿಸಲಾಗುತ್ತಿದೆ.ತಾಲೂಕು ಮಟ್ಟದ
ಕ್ರೀಡಾಕೂಟ ಆಯೋಜನೆಯ ಸ್ಥಳ ಮತ್ತು ದಿನಾಂಕ:
ಬಂಟ್ವಾಳ- ಸೆಪ್ಟೆಂಬರ್ 6 ರಂದು ಬೆಳಿಗ್ಗೆ 8 ಗಂಟೆಗೆ ವಿಟ್ಲ ವಿಠಲ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆಯಲಿದೆ.
ಮಂಗಳೂರು- ಸೆಪ್ಟೆಂಬರ್ 13 ರಂದು ಬೆಳಿಗ್ಗೆ 8 ಗಂಟೆಗೆ ಮಂಗಳೂರು ತಾಲೂಕಿನ ಜಿಲ್ಲಾ ಕ್ರೀಡಾಂಗಣ (ಮಂಗಳಾ ಕ್ರೀಡಾಂಗಣ)ದಲ್ಲಿ ನಡೆಯಲಿದೆ.
ಉಳ್ಳಾಲ- ಸೆಪ್ಟೆಂಬರ್ 13 ರಂದು ಬೆಳಿಗ್ಗೆ 8 ಗಂಟೆಗೆ ಕೊಣಾಜೆ ಮಂಗಳೂರು ವಿಶ್ವವಿದಾಲಯ ಕ್ರೀಡಾಂಗಣದಲ್ಲಿ ನಡೆಯಲಿದೆ.
ಪುತ್ತೂರು-ಸೆಪ್ಟೆಂಬರ್ 13 ರಂದು ಬೆಳಿಗ್ಗೆ 8 ಗಂಟೆಗೆ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ (ಫುಟ್ಬಾಲ್ ಹೊರತುಪಡಿಸಿ ಎಲ್ಲಾ ಕ್ರೀಡೆಗಳು) ಮತ್ತು ಪುತ್ತೂರು ವಿವೇಕಾನಂದ ಪದವಿ ಕಾಲೇಜಿನಲ್ಲಿ (ಫುಟ್ಬಾಲ್ ಕ್ರೀಡೆ) ನಡೆಯಲಿದೆ.
ಸುಳ್ಯ -ಸೆ.19 ರಂದು ಬೆಳಿಗ್ಗೆ 8 ಗಂಟೆಗೆ ಪುರುಷರಿಗೆ ಫುಟ್ಬಾಲ್ ಕ್ರೀಡೆ ಮತ್ತು ಸೆಪ್ಟೆಂಬರ್ 20 ರಂದು ಬೆಳಿಗ್ಗೆ 8 ಗಂಟೆಗೆ (ಫುಟ್ಬಾಲ್ ಹೊರತುಪಡಿಸಿ ಉಳಿದ ಎಲ್ಲಾ ಕ್ರೀಡೆಗಳು) ಪಂಜ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೋಟಿ ಚೆನ್ನಯ್ಯ ಕ್ರೀಡಾಂಗಣದಲ್ಲಿ ನಡೆಯಲಿದೆ.
ಕಡಬ- ಸೆಪ್ಟೆಂಬರ್ 13 ರಂದು ಬೆಳಿಗ್ಗೆ 8 ಗಂಟೆಗೆ ಪುತ್ತೂರು ವಿವೇಕಾನಂದ ಪದವಿ ಕಾಲೇಜಿನಲ್ಲಿ ಪುರುಷರಿಗೆ ಫುಟ್ಬಾಲ್ ಕ್ರೀಡೆ ನಡೆಯಲಿದೆ. ಸೆಪ್ಟೆಂಬರ್ 20 ರಂದು ಬೆಳಿಗ್ಗೆ 8 ಗಂಟೆಗೆ ಫುಟ್ಬಾಲ್ ಹೊರತುಪಡಿಸಿ ಉಳಿದ ಎಲ್ಲಾ ಕ್ರೀಡೆಗಳು ಕಡಬ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆಯಲಿದೆ.
ಮೂಡಬಿದ್ರೆ- ಸೆಪ್ಟೆಂಬರ್ 20 ರಂದು ಬೆಳಿಗ್ಗೆ 8 ಗಂಟೆಗೆ ಮೂಡಬಿದರೆ ತಾಲೂಕು ಸ್ವರಾಜ್ ಮೈದಾನ ಕ್ರೀಡಾಂಗಣದಲ್ಲಿ ನಡೆಯಲಿದೆ.
ಬೆಳ್ತಂಗಡಿ- ಸೆಪ್ಟೆಂಬರ್ 13 ರಂದು ಬೆಳಿಗ್ಗೆ 8 ಗಂಟೆಗೆ ಫುಟ್ಬಾಲ್ ಕ್ರೀಡೆ ಹಾಗೂ ಸೆಪ್ಟೆಂಬರ್ 20 ರಂದು ಬೆಳಿಗ್ಗೆ 8 ಗಂಟೆಗೆ (ಫುಟ್ಬಾಲ್ ಹೊರತುಪಡಿಸಿ ಉಳಿದ ಎಲ್ಲಾ ಕ್ರೀಡೆಗಳು) ಮಡಂತ್ಯಾರು ಸೇಕ್ರೇಡ್ ಹಾಟ್ರ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ. ಮುಲ್ಕಿ- ಸೆಪ್ಟೆಂಬರ್ 20 ರಂದು ಬೆಳಿಗ್ಗೆ 8 ಗಂಟೆಗೆ ಗಾಂಧಿ ಮೈದಾನ, ಮುಲ್ಕಿ ಹಾಗೂ ಮುಲ್ಕಿ ಸರ್ಕಾರಿ ಪದವಿ ಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ.
ಜಿಲ್ಲಾ ಮಟ್ಟದ ಕ್ರೀಡಾಕೂಟ:
ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕ್ರೀಡಾಕೂಟ ಸೆಪ್ಟೆಂಬರ್ 27 ರಂದು ಬೆಳಿಗ್ಗೆ 8 ಗಂಟೆಗೆ ನಗರದ ಮಂಗಳಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್ , ವಾಲಿಬಾಲ್, ಖೋ ಖೋ, ಕಬಡ್ಡಿ, ಥ್ರೋಬಾಲ್ , ಯೋಗಾಸನ ಮತ್ತು ಫುಟ್ ಬಾಲ್ (ಪುರುಷರಿಗೆ ಮಾತ್ರ) ಆಯೋಜಿಸಲಾಗುತ್ತದೆ. ವಯಸ್ಸಿನ ಮಿತಿ ಇರುವುದಿಲ್ಲ.
ಜಿಲ್ಲಾ ಮಟ್ಟ : ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳು ಹಾಗೂ ಗುಂಪು ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.
ಹಾಕಿ, ಬಾಸ್ಕೆಟ್ ಬಾಲ್, ಕುಸ್ತಿ, ಬ್ಯಾಡ್ಮಿಂಟನ್, ಹ್ಯಾಂಡ್ ಬಾಲ್, ಟೇಬಲ್ ಟೆನ್ನಿಸ್, ಬಾಲ್ ಬ್ಯಾಡ್ಮಿಂಟನ್ ಕ್ರೀಡೆಗಳನ್ನು ನೇರವಾಗಿ ಜಿಲ್ಲಾ ಮಟ್ಟದಲ್ಲಿ ಏರ್ಪಡಿಸಲಾಗುವುದು. ಟೆನ್ನಿಸ್, ನೆಟ್ ಬಾಲ್ ಮತ್ತು ಈಜು, ಟೇಕ್ವಾಂಡೋ, ಜುಡೋ, ವುಷು, ಕರಾಟೆ ಕ್ರೀಡೆಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಆಯ್ಕೆ ಮಾಡಲಾಗುತ್ತದೆ.
ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಅಥವಾ ನೇರವಾಗಿ ಜಿಲ್ಲಾ ಮಟ್ಟದಲ್ಲಿ ನಡೆಯುವ ಸ್ಪರ್ಧೆಗಳಲ್ಲಿ ಭಾಗವಹಿಸುವವರು ತಮ್ಮ ವಿವರಗಳನ್ನು ವೆಬ್ಪೋರ್ಟಲ್ನಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಆಯಾ ತಾಲೂಕಿನಲ್ಲಿ ಸ್ಪರ್ಧೆ ನಡೆಯುವ ಸ್ಥಳದಲ್ಲಿ ಬೆಳಿಗ್ಗೆ 8 ಗಂಟೆಗೆ ಹಾಜರಾಗಬೇಕು.










