ಸುಳ್ಯ:ಶಿಕ್ಷಕರ ದಿನಾಚರಣೆಯ ಅಂಗವಾಗಿ ನೀಡುವ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಟಿಸಲಾಗಿದೆ.ಸುಳ್ಯ ತಾಲೂಕಿನ ಮೂರು ಮಂದಿ ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ದೊರೆತಿದೆ. ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ

ಯಶೋಧರ.ಕೆ, ಭುವನೇಶ್ವರಿ. ಕೆ,ಕಿಶೋರ್ ಕುಮಾರ್
ಪಾಂಡಿಗದ್ದೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ಯಶೋಧರ.ಕೆ, ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಎಣ್ಮೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಭುವನೇಶ್ವರಿ ಕೆ, ಪ್ರೌಢಶಾಲಾ ವಿಭಾಗದಲ್ಲಿ ಅರಂತೋಡು ಎನ್ಎಂಪಿಯು ಕಾಲೇಜಿನ ಪ್ರೌಢಶಾಲಾ ವಿಭಾಗದ ಸಹಶಿಕ್ಷಕ ಕಿಶೋರ್ ಕುಮಾರ್ ಅವರಿಗೆ ಅವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ದೊರಕಿದೆ. ಸೆ.5ರಂದು ನಡೆಯುವ ಜಿಲ್ಲಾ ಮಟ್ಟದ ಶಿಕ್ಷಕ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.










