ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವರಾದ ಸಚಿವರಾದ ದಿನೇಶ್ ಗುಂಡೂರಾವ್ ಅವರು ಜುಲೈ 21 ರಂದು ದ.ಕ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಜುಲೈ 21 ರಂದು ಭಾನುವಾರ ಬೆಳಿಗ್ಗೆ 10.30 ಗಂಟೆಗೆ ಮಂಗಳುರು
ವಿಮಾನ ನಿಲ್ದಾಣಕ್ಕೆ ಆಗಮನ. ಬಳಿಕ 11 ಗಂಟೆಗೆ ಮಳೆಯಿಂದ ಹಾನಿಗೊಳಗಾದ ಜಿಲ್ಲೆಯ ಪ್ರದೇಶಗಳಿಗೆ ಭೇಟಿ, ಮಧ್ಯಾಹ್ನ 3 ಗಂಟೆಗೆ ನಗರದ ಸರ್ಕ್ಯೂಟ್ ಹೌಸ್ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಿಂದ ಹಾನಿ ಉಂಟಾಗುತ್ತಿರುವ ಪ್ರದೇಶಗಳಲ್ಲಿ ಅಗತ್ಯ ರಕ್ಷಣಾ ಕಾರ್ಯ ಮತ್ತು ಮುಂಜಾಗ್ರತಾ ಕ್ರಮದ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.