ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಆ.15ರ ಮಂಗಳವಾರ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.
ವಿವರ ಇಂತಿದೆ:ಆಗಸ್ಟ್ 15ರಂದು ಬೆಳಿಗ್ಗೆ 9ಗಂಟೆಗೆ ನಗರದ ನೆಹರೂ ಮೈದಾನದಲ್ಲಿ ಆಯೋಜಿಸಲಾಗಿರುವ ಸ್ವಾತಂತ್ರೋತ್ಸವ ದಿನಾಚರಣೆ
ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸುವರು. ನಂತರ 9.45ಕ್ಕೆ ನಗರದ ಪುರಭವನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 12:30ಕ್ಕೆ, ಕೊಡಿಯಾಲ್ಬೈಲ್ ನ ಯೆನಪೋಯಾ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಆರ್ಥೋಪೆಡಿಕ್ ರೋಬೋಟಿಕ್ ಸರ್ಜಿಕಲ್ ಫೆಸಿಲಿಟಿ ಮತ್ತು ಅಡ್ರೆಸ್ಸಿಂಗ್ ಆಫ್ ಓನರ್ ಆಫ್ ದ ಅಸೋಸಿಯೇಷನ್ ಆಫ್ ಪ್ರೈವೇಟ್ ಹಾಸ್ಪಿಟಲ್ ಆಫ್ ಮ್ಯಾಂಗಳೂರ್ ಇದರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 3 ಗಂಟೆಗೆ ನಗರದ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಫಸ್ಟ್ ನ್ಯೂರೋ ಬ್ರೈನ್ ಅಂಡ್ ಸ್ಫೈನ್ ಸೂಪರ್ ಸ್ಪೆಶಾಲಿಟಿ ಹಾಸ್ಪಿಟಲ್ ನ ಉದ್ಘಾಟನೆಯಲ್ಲಿ ಭಾಗವಹಿಸುವರು. ಸಂಜೆ 5ಗಂಟೆಗೆ ನಗರದ ಸರ್ಕ್ಯೂಟ್ ಹೌಸ್ ನಲ್ಲಿ ವಾಸ್ತವ್ಯ ಮಾಡಿ, ನಂತರ ರಾತ್ರಿ 9ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.