ಮಂಗಳೂರು:ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿದಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಾಗೂ ಕಾಸರಗೋಡು ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಹವಾಮಾನ ಇಲಾಖೆಯು ಗುರುವಾರ ರೆಡ್ ಅಲರ್ಟ್ ಘೋಷಣೆ ಮಾಡಿದೆ.ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು ಸೇರಿದಂತೆ
ಇತರ ಜಿಲ್ಲೆಗಳಲ್ಲೂ ಹಾಗು ಕಾಸರಗೋಡಿನಲ್ಲಿ ಭಾರೀ ಮಳೆ ಮುಂದುವರಿದಿದೆ.ಎಡೆ ಬಿಡದೆ ಸುರಿಯುವ ಕುಂಭದ್ರೋಣ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.ಶುಕ್ರವಾರವೂ (ಜುಲೈ 7) ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಶನಿವಾರ ಮತ್ತು ಭಾನುವಾರವೂ ಮಳೆ ಜಾಸ್ತಿ ಇರುವ ಸಾಧ್ಯತೆ ಇದ್ದು, ಈ ಎರಡು ದಿನಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮಳೆಗೆ ದ.ಕ.ಜಿಲ್ಲೆಯ ವಿವಿಧಢೆ ನದಿ, ಹಳ್ಳ ಕೊಳ್ಳಗಳು ತುಂಬಿ ಹರಿದಿದೆ. ತಗ್ಗು ಪ್ರದೇಶಗಳು ಜಲಾವೃತವಾಗಿದೆ.
ಮೂಲ್ಕಿ ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನವು ಜಲಾವೃತಗೊಂಡಿದೆ. ಕೊಡಗು ಜಿಲ್ಲೆಯ ಹಲವೆಡೆ ಗುರುವಾರ ಧಾರಾಕಾರವಾಗಿ ಮಳೆ ಸುರಿಯುತ್ತಿದೆ.