ಸುಳ್ಯ: ಲೋಕಸಭಾ ಚುನಾವಣೆಯ ಮತದಾನ ಮುಕ್ತಾಯಗೊಂಡಿದ್ದು ದ.ಕ.ಲೋಕಸಭಾ ಕ್ಷೇತ್ರದಲ್ಲಿ ಪ್ರಾಥಮಿಕ ವರದಿಯಂತೆ ಶೇ.77.44 ಮತದಾನ ದಾಖಲಾಗಿದೆ ಎಂದು. ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ತಿಳಿಸಿದ್ದಾರೆ. ಅಂತಿಮ ಲೆಕ್ಕಾಚಾರ ಬರುವಾಗ ಶೇಖಡಾ ಮತದಲ್ಲಿ ಅಲ್ಪ ಹೆಚ್ಚಳ ಆಗುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.
ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಶೇ.83 ಮತದಾನವಾಗಿದೆ. 1,73,354 ಮಂದಿ ಮತದಾರರು ಮತ ಚಲಾಯಿಸಿದ್ದು ಶೇ. 83 ಮತದಾನ ಆಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.