ಸುಳ್ಯ:ಡಿ.ಕೆ.ಶಿವಕುಮಾರ್ ) ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಹಿನ್ನಲೆಯಲ್ಲಿ ಅವರಿಗೆ ಆಡಳಿತ ಯಶಸ್ಸು ಸಿಗಲೆಂದು ಸುಳ್ಯ ತಾಲೂಕಿನ ವಿವಿಧ ದೇವಸ್ಥಾನಗಳಲ್ಲಿ, ಮಸೀದಿ, ಚರ್ಚ್ಗಳಲ್ಲಿ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಪ್ರಾರ್ಥನೆ ನಡೆಸಿದರು. ವ್ಯವಸ್ಥಾಪನಾ ಸಮಿತಿಗಳ
ವತಿಯಿಂದ ವಿವಿಧ ದೇವಾಲಯಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ, ಸುಳ್ಯ ಚೆನ್ನಕೇಶವ ದೇವಸ್ಥಾನ, ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ,ಅಡ್ಕಾರ್ ಸುಬ್ರಹ್ಮಣ್ಯ ದೇವಸ್ಥಾನ, ದುಗ್ಗಲಡ್ಕ ಮುಹಿಯುದ್ದೀನ್ ಜುಮಾ ಮಸೀದಿ, ಪೈಂದೋಡಿ ಸುಬ್ರಾಯ ಪಂಜ ಆಲೆಟ್ಟಿ ಸದಾಶಿವ ದೇವಸ್ಥಾನ, ಹರಿಹರ ಪಲ್ಲತ್ತಡ್ಕದ ಶ್ರೀ ಹರಿಹರೇಶ್ವರ ದೇವಸ್ಥಾನ, ಸುಳ್ಯದ ಚರ್ಚ್, ಚೊಕ್ಕಾಡಿ ಉಳ್ಳಾಕುಲು ನಾಯರ್ ದೈವಸ್ಥಾನದಲ್ಲಿ, ಐವರ್ನಾಡು ಪಂಚಲಿಂಗೇಶ್ವರ ದೇವಸ್ಥಾನ, ಕರ್ಲಪ್ಪಾಡಿ ಶಾಸ್ತಾವೇಶ್ವರ ದೇವಸ್ಥಾನ, ಸೇರಿ ವಿವಿಧ ದೇವಸ್ಥಾನಗಳಲ್ಲಿ ಪ್ರಾರ್ಥನೆ ಸಲ್ಲಿಸಿದರು.














