ಸುಳ್ಯ:ಕನ್ನಡ ರಾಜ್ಯೋತ್ಸವ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾಡಳಿತ ನೀಡುವ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಲಾಗಿದೆ. ವೈಯುಕ್ತಿಕ ವಿಭಾಗದಲ್ಲಿ 56 ಮಂದಿಗೆ ಹಾಗೂ ಸಂಘ ಸಂಸ್ಥೆ ವಿಭಾಗದಲ್ಲಿ 20 ಪ್ರಶಸ್ತಿ ಘೋಷಿಸಲಾಗಿದೆ. ಆದರೆ ಈ ಬಾರಿ ಸುಳ್ಯ ತಾಲೂಕಿನ
ಯಾವೊಬ್ಬ ವ್ಯಕ್ತಿ ಅಥವಾ ಸಂಘ ಸಂಸ್ಥೆಗಳು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿಲ್ಲ. ಪ್ರತಿ ವರ್ಷ ಒಂದು ಅಥವಾ ಎರಡು ಪ್ರಶಸ್ತಿ ಸುಳ್ಯ ತಾಲೂಕಿನವರಿಗೆ ಬರುತ್ತಿತ್ತು. ಆದರೆ ಈ ಬಾರಿ ಸುಳ್ಯದ ಯಾರಿಗೂ ಪ್ರಶಸ್ತಿ ಬಂದಿಲ್ಲ. ಸುಳ್ಯ ತಾಲೂಕನ್ನು ಸಂಪೂರ್ಣ ಕಡೆಗಣಿಸಲಾಗಿದೆ ಎಂದು ಸಾರ್ವಜನಿಕ ಹಾಗೂ ರಾಜಕೀಯ ವಲಯದಿಂದ ಆಕ್ಷೇಪ ವ್ಯಕ್ತವಾಗಿದೆ.