ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಮಂಗಳೂರು ಕಮಿಷನರೇಟ್ ವ್ಯಾಪ್ತಿಗೆ ಸೀಮಿತವಾಗಿ ಜಾರಿಗೊಳಿಸಲಾಗಿದ್ದ ನಿಷೇಧಾಜ್ಞೆಯನ್ನು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವಿಸ್ತರಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಮೇ.2ರಿಂದ 5ರ ರಾತ್ರಿ 12 ಗಂಟೆಯ ತನಕ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ಎಂ.ಪಿ. ಅವರು ಆದೇಶ ಹೊರಡಿಸಿದ್ದಾರೆ.
ದ.ಕ.ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಸುಳ್ಯ, ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಕಡಬ ತಾಲೂಕಿನಾದ್ಯಂತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.