ಸುಬ್ರಹ್ಮಣ್ಯ: ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಇಂದು ಮಂಗಳವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಸಂದರ್ಭದಲ್ಲಿ ಉಂಟಾಗಿರುವ ನಕ್ಸಲ್ ಆತಂಕದ ಬಗ್ಗೆ ಹಾಗೂ ಚುನಾವಣಾ ಸಂದರ್ಭದಲ್ಲಿ ಕೋವಿ ಠೇವಣಾತಿ ಮಾಡುವುದರಿಂದ ಕೃಷಿಕರಿಗೆ ವಿನಾಯಿತಿ ನೀಡಬೇಕು ಎಂಬ ವಿಚಾರದ ಬಗ್ಗೆ ಪತ್ರಕರ್ತರ ಪ್ರಶ್ನಗೆ ಪ್ರತಿಕ್ರಿಯೆ ನೀಡಿದರು.ಕೃಷಿಕರು ಈ ಬೇಡಿಕೆ
ಮುಂದಿಟ್ಟು ಹಕ್ಕೊತ್ತಾಯ ಮಾಡಿರುವ ಬಗ್ಗೆ ಗಮನಕ್ಕೆ ಬಂದಿದೆ. ಇದು ಹಿಂದಿನಿಂದಲೂ ನಡೆದು ಬಂದ ಪದ್ಧತಿ. ಚುನಾವಣಾ ಆಯೋಗದ ಆದೇಶದ ಮೇರೆಗೆ ಕೋವಿಗಳನ್ನು ಪೊಲೀಸ್ ಠಾಣೆಯಲ್ಲಿ ಠೇವಣಾತಿ ಇಡಬೇಕಾಗಿದೆ. ಈ ಬಗ್ಗೆ ಏನು ಮಾಡಬಹುದು ಎಂಬುದರ ಬಗ್ಗೆ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ಮಾಡುತ್ತೇನೆ ಎಂದು ಅವರು ಹೇಳಿದರು.ಕೂಜಿಮಲೆ ಹಾಗೂ ಐನೆಕ್ಕಿದು ಗ್ರಾಮಕ್ಕ ಶಂಕಿತ ನಕ್ಸಲರ ತಂಡ ಭೇಟಿ ನೀಡಿರುವ ಬಗ್ಗೆ ಹಿರಿಯ ಅಧಿಕಾರಿಗಳ ಗಳೊಂದಿಗೆ ಮಾತನಾಡುತ್ತೇನೆ ಎಂದು ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಇದೆ .ಅದರೊಂದಿಗೆ ದೇವರ ಆಶೀರ್ವಾದ ಬೇಡಲು ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು, ಶೃಂಗೇರಿ, ಗೌರಿಗದ್ದೆ, ಗೋಕರ್ಣ, ಮುಂತಾದ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆಯುವ ಉದ್ದೇಶ ನಮ್ಮದಾಗಿದೆ. ನಮಗೆ ದೇವರಲ್ಲಿ ಸಂಪೂರ್ಣ ನಂಬಿಕೆ ಇದೆ ಧರ್ಮದ ಬಗ್ಗೆ ನಂಬಿಕೆ ಇದೆ ಎಂದರು . ಈ ಹಿಂದೆ ನಡೆದ ರಾಜ್ಯ ಅಸೆಂಬ್ಲಿ ಚುನಾವಣೆಯಲ್ಲಿ ಕೂಡ ಕೂಡ ದೇವರು ನಮ್ಮನ್ನ ಕೈ ಬಿಟ್ಟಿಲ್ಲ. ಒಳ್ಳೆಯದನ್ನೇ ಮಾಡಿದ್ದಾರೆ. ಈ ಬಾರಿಯೂ ರಾಜ್ಯದಲ್ಲಿ ಅತೀ ಹೆಚ್ಚು ಸೀಟ್ ಬರುವ ವಿಶ್ವಾಸ ಇದೆ ಎಂದರು.
ಡಿ.ಕೆ.ಶಿವಕುಮಾರ್ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ತದನಂತರ ಹೊಸಳಿಗಮ್ಮ ದೈವದ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ, ಕಡಬ ಬ್ಲಾಕ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಕಾಂಗ್ರೆಸ್ ಮುಖಂಡರುಗಳಾದ ಭರತ್ ಮುಂಡೋಡಿ, ಧನಂಜಯ ಅಡಪಾಂಗಾಯ , ಮಮತಾ ಗಟ್ಟಿ, ಜಿ.ಕೃಷ್ಣಪ್ಪ, ಅಶೋಕ ನೆಕ್ರಾಜೆ , ಪಿ ಬಿ ವರ್ಗೀಸ್, ಮಾಧವ ಮಾನಾಡು, ದಿನೇಶ್ ಮಡ್ತಿಲ್, ಹರೀಶ ಇಂಜಾಡಿ ,ರಾಜೀವ್ ರೈ, ವಿಜಯಕುಮಾರ ಸೊರಕೆ, ವಿಮಲ ರಂಗಯ್ಯ, ಸರಸ್ವತಿ ಕಾಮತ್, ಶಿವರಾಮ ರೈ, ಕೃಷ್ಣಮೂರ್ತಿ ಭಟ್ ಮುಂತಾದವರು ಹಾಜರಿದ್ದರು.