ಸುಬ್ರಹ್ಮಣ್ಯ:ರಾಜ್ಯದ ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರು ಆಗಿರುವ ಡಿ.ಕೆ.ಶಿವಕುಮಾರ್ ಅವರು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಾ.26ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು. ಸುಬ್ರಹ್ಮಣ್ಯಕ್ಕೆ ಬಂದು ದೇವರಿಗೆ ಪೂಜೆ ಸಲ್ಲಿಸಿದ ಅವರು
ಹೊಸೊಳಿಗಮ್ಮನ ದರ್ಶನ ಪಡೆದರು. ದೇವಸ್ಥಾನಕ್ಕೆ ಆಗಮಿಸಿದ ಅವರನ್ನು ದೇವಸ್ಥಾನದ ವತಿಯಿಂದ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಕಡಬ ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತ ಗಟ್ಟಿ, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ, ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ, ಪ್ರಮುಖರಾದ ಅಶೋಕ್ ನೆಕ್ರಾಜೆ, ಪಿ.ಸಿ.ವರ್ಗೀಸ್, ದಿನೇಶ್ ಮಡ್ತಿಲ, ಸರಸ್ವತಿ ಕಾಮತ್ ಪ್ರವೀಣ ಮರುವಂಜ, ವಿಮಲಾ ರಂಗಯ್ಯ ಮತ್ತಿತರರು ಉಪಸ್ಥಿತರಿದ್ದರು