ಬೆಳ್ತಂಗಡಿ: ಯುವ ಸಮುದಾಯಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ದ.ಕ. ಜಿಲ್ಲೆಯಲ್ಲಿ ಈ ಬಾರಿ 4 ಹೊಸ ಮುಖಗಳನ್ನು ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳಾಗಿ ಆಯ್ಕೆ ಮಾಡಲಾಗಿದ್ದು ದ.ಕ. ಜಿಲ್ಲೆಯಲ್ಲಿ ಕಾಂಗ್ರೆಸ್ ಪ್ರಾಬಲ್ಯ ಮೆರೆದರೆ ಕರ್ನಾಟಕದಲ್ಲಿ ಸರಕಾರ ರಚಿಸಲು ಹೆಚ್ಚಿನ ಅವಕಾಶವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಭಿಪ್ರಾಯಪಟ್ಟರು.ಅವರು ಶನಿವಾರ ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಾಲಯದ ರಥಬೀದಿಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಬೆಳ್ತಂಗಡಿಯ
ಅಭ್ಯರ್ಥಿ ರಕ್ಷಿತ್ ಶಿವರಾಂ ಅವರ ಚುನಾವಣಾ ಪ್ರಚಾರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು”ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ೧೪೧ ಸ್ಥಾನ ಲಭಿಸಲಿದ್ದು, ಕಾಂಗ್ರೆಸ್ ಸರಕಾರ ರಚಿಸುವುದು ಖಚಿತ. ಕಾಂಗ್ರೆಸ್ ಸರಕಾರ ಬಂದಲ್ಲಿ ಕರಾವಳಿ-ಮಲೆನಾಡು ಅಭಿವೃದ್ಧಿ ಮಂಡಳಿ ಸ್ಥಾಪಿಸಿ ಉದ್ಯೋಗ ಸೃಷ್ಟಿಯ ವ್ಯವಸ್ಥೆ ಕೈಗೊಳ್ಳಲಾಗುವುದು. ರಾಜ್ಯದ ರೈತರಿಗೆ ಹಾಗೂ ಮಹಿಳೆಯರ ಅಭಿವೃದ್ಧಿಗಾಗಿ ಹೆಚ್ಚಿನ ಯೋಜನೆಗಳನ್ನು ರೂಪಿಸಲಾಗುವುದು ಎಂದು ಅವರು ತಿಳಿಸಿದರು. ಅರಣ್ಯ ಭೂಮಿ ಒತ್ತುವರಿ,ಕುಮ್ಕಿ ಮೊದಲಾದ ಜಮೀನುಗಳ ಸಕ್ರಮಕ್ಕೆ ಕೇಂದ್ರಕ್ಕೆ ಶಿಫಾರಸ್ಸು ಸಲ್ಲಿಸಲಾಗುವುದು.
ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಮಾತನಾಡಿದರು.
ವೇದಿಕೆಯಲ್ಲಿ ಎಐಸಿಸಿ ಕಾರ್ಯದರ್ಶಿ ಹಾಗು ರಾಜ್ಯ ಉಸ್ತುವಾರಿ ರೋಜಿ ಎಂ.ಜಾನ್, ಯೂತ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್, ಮಾಜಿ ಶಾಸಕ ವಸಂತ ಬಂಗೇರ, ಕಾಂಗ್ರೆಸ್ ದ.ಕ.ಜಿಲ್ಲಾ ಅಧ್ಯಕ್ಷ ಕೆ. ಹರೀಶ್ ಕುಮಾರ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಕೆಪಿಸಿಸಿ ಬೆಳ್ತಂಗಡಿ ಉಸ್ತುವಾರಿ ಟಿ.ಎಂ.ಶಹೀದ್ ತೆಕ್ಕಿಲ್ ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ, ಮಾಜಿ ಸಚಿವ ಅಭಯಚಂದ್ರ ಜೈನ್, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶೈಲೇಶ್ ಕುಮಾರ್,ರಂಜನ್ ಜಿ. ಗೌಡ, ಮುಖಂಡರುಗಳಾದ ಶಾಹುಲ್ ಹಮೀದ್, ಮಮತಾ ಗಟ್ಟಿ , ಇ.ಸುಂದರ ಗೌಡ, ಅಭಿನಂದನ್ ಹರೀಶ್ ಕುಮಾರ್ , ಕೃಪಾ ಅಮರ್ ಆಳ್ವ, ಎಂ.ಜಿ.ಹೆಗ್ಡೆ, ಮತ್ತಿತರರು ಇದ್ದರು.