ಬೆಂಗಳೂರು: ನೂತನ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆಯಾಗಿದ್ದಾರೆ. ಇಂದು ಸಂಜೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಅವರು
ಡಿಕೆಶಿ ಹೆಸರನ್ನು ಸೂಚನೆ ಮಾಡಿದರು. ಡಾ.ಜಿ.ಪರಮೇಶ್ವರ್ ಅನುಮೋದಿಸಿದ್ದಾರೆ.
ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿದಂತೆ ಹಲವು ಹಿರಿಯ ನಾಯಕರು ಮತ್ತು ಪಕ್ಷದ ಎಲ್ಲಾ ಶಾಸಕರು ಭಾಗವಹಿಸಿದ್ದರು.















