ಬೆಂಗಳೂರು:ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರಿಗೆ ಇಂದು ಹುಟ್ಟುಹಬ್ಬ ಸಂಭ್ರಮ.ಹಲವು ಮಂದಿ ಡಿವಿಎಸ್ ಅವರಿಗೆ ಶುಭಾಶಯ ಕೋರಿದ್ದಾರೆ.ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಡಿ.ವಿ.ಹುಟ್ಟು ಹಬ್ಬಕ್ಕೆ ಶುಭಕೋರಿದ್ದಾರೆ. ಇಬ್ಬರೂ ನಾಯಕರು ಪರಸ್ಪರ ಹಸ್ತಲಾಘವ ಮಾಡಿಕೊಂಡಿರುವ
ಫೊಟೋ ಡಿಕೆಶಿ ತನ್ನ ಫೇಸ್ ಬುಕ್ ನಲ್ಲಿ ಶೇರ್ ಮಾಡಿಕೊಂಡು’ಮಾಜಿ ಮುಖ್ಯಮಂತ್ರಿಗಳು, ಮಾಜಿ ಕೇಂದ್ರ ಸಚಿವರು ಹಾಗೂ ಹಿರಿಯ ನಾಯಕರಾದ ಶ್ರೀ ಸದಾನಂದ ಗೌಡ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ಭಗವಂತ ತಮಗೆ ಆಯಸ್ಸು ಆರೋಗ್ಯ ನೀಡಲಿ ಎಂದು ಹಾರೈಸುತ್ತೇನೆ ಎಂದು ಶುಭ ಹಾರೈಸಿದ್ದಾರೆ
ಡಿವಿ ಸದಾನಂದ ಗೌಡ ಕಾಂಗ್ರೆಸ್ ಸೇರ್ತಾರೆ ಅನ್ನುವ ಸುದ್ದಿ ಹರಿದಾಡುತ್ತಿರುವ ಸಂದರ್ಭದಲ್ಲಿ ಡಿಕೆಶಿ ಅವರ ಶುಭಾಶಯ ವಿಶೇಷ ಗಮನ ಸೆಳೆದಿದೆ. ಡಿವಿ ಸದಾನಂದ ಗೌಡ ಅವರು ಮಂಗಳವಾರ ತನ್ನ ಮುಂದಿನ ರಾಜಕೀಯ ನಡೆಯ ಬಗ್ಗೆ ನಿರ್ಧಾರ ತಿಳಿಸುವುದಾಗಿ ತಿಳಿಸಿದ್ದಾರೆ.









