ಸುಳ್ಯ:ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ದಿವ್ಯ ಎ.ಕೆ, ಇವರ ಸಂಶೋಧನಾ ಪ್ರಬಂಧಕ್ಕೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಇವರು ಸುಳ್ಯ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ
ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾಗಿರುವ ಡಾ. ಉಜ್ವಲ್ ಯು.ಜೆ. ಹಾಗೂ ಎಲೆಕ್ಟಾçನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ಪ್ರೊಫೆಸರ್ ಆಗಿರುವ ಡಾ. ಭಾಗ್ಯ ಹೆಚ್.ಕೆ. ಇವರ ಮಾರ್ಗದರ್ಶನದಲ್ಲಿ Darkness Reversal and Reflection Reduction of Dark Eyeglasses in Videos using Video Enhancement Techniques” ಎಂಬ ವಿಷಯದ ಕುರಿತು ಮಹಾಪ್ರಬಂಧವನ್ನು ಮಂಡಿಸಿದ್ದರು. ಇವರ ಹಲವಾರು ಪ್ರಬಂಧಗಳು ರಾಷ್ಟ್ರೀಯ ಮತ್ತು ಅಂತರಾಷ್ಟಿ್ರೀ ನಿಯತಕಾಲಿಕೆಗಳಲ್ಲಿ ಪ್ರಕಟಣೆಗೊಂಡಿದೆ. ಇವರು ನಾರಾಯಣ ಗೌಡ ಅಗಲ್ಪಾಡಿ ಮತ್ತು ಜಾನಕಿ ದಂಪತಿಗಳ ಪುತ್ರಿ ಹಾಗೂ ಇಂಜಿನಿಯರ್ ಭಾಸ್ಕರ ಮೇರ್ಕಜೆಯವರ ಪತ್ನಿ. ಇವರು ಸುಮಾರು ೨೦ ವರ್ಷಗಳಿಂದ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದಲ್ಲಿ ಅಸೋಸಿಯೇಟ್ ಪ್ರೊಫೆಸರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.
ಇವರನ್ನು ಡಾ. ರೇಣುಕಾಪ್ರಸಾದ್ ಕೆ.ವಿ, ಚೇರ್ಮೆನ್ ಕಮಿಟಿ ‘ಬಿ’ ಎ.ಒ.ಎಲ್.ಇ.ಸುಳ್ಯ, ಡಾ. ಜ್ಯೋತಿ ಆರ್. ಪ್ರಸಾದ್ ಕಾರ್ಯದರ್ಶಿ, ಕಮಿಟಿ ‘ಬಿ’ ಎ.ಒ.ಎಲ್.ಇ.(ರಿ), ಸುಳ್ಯ, ಡಾ. ಉಜ್ವಲ್ ಯು.ಜೆ., ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು, ಮೌರ್ಯ ಆರ್. ಕುರುಂಜಿ, ಎಕ್ಸೆಕ್ಯುಟಿವ್ ಡೈರೆಕ್ಟರ್, ಕೆ.ವಿ.ಜಿ.ಡಿ.ಸಿ.&ಹೆಚ್, ಸುಳ್ಯ, ಪ್ರಾಂಶುಪಾಲ ಡಾ. ಸುರೇಶ ವಿ. ಮತ್ತು ಉಪಪ್ರಾಂಶುಪಾಲ
ಡಾ. ಶ್ರೀಧರ್ ಕೆ. ಅಭಿನಂದಿಸಿದ್ದಾರೆ.