ಸುಳ್ಯ: ಸುಳ್ಯ ತಾಲೂಕು ತೊಡಿಕಾನ ದೊಡ್ಡಕುಮೇರಿ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನದ ವಾರ್ಷಿಕ ನೇಮೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಸಚಿವರಾದ ಎಸ್. ಅಂಗಾರ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ
ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಅರಂತೋಡು ತೊಡಿಕಾನ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಿಶೋರ್ ಕುಮಾರ್ ಉಳುವಾರು, ಅರಂತೋಡು ಗ್ರಾ.ಪಂ.ಅಧ್ಯಕ್ಷೆ ಹರಿಣಿ ದೇರಾಜೆ, ಸದಸ್ಯ ಕೇಶವ ಅಡ್ತಲೆ, ಜಾನಪದ ವಿದ್ವಾಂಸರಾದ ಡಾ.ಸುಂದರ್ ಕೇನಾಜೆ, ಹಿರಿಯರಾದ ಕೇಶವ ಪ್ರಸಾದ್ ತೊಡಿಕಾನ ಮತ್ತಿತರರು ಉಪಸ್ಥಿತರಿದ್ದರು.