ಸುಳ್ಯ:ದೊಡ್ಡತೋಟ ಶ್ರೀರಾಮ ಭಜನಾ ಮಂದಿರ ಜೀರ್ಣೋದ್ಧಾರಗೊಳ್ಳುತ್ತಿದ್ದು, ನೂತನ ಭಜನಾ ಮಂದಿರಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದಿಂದ ಎರಡು ಲಕ್ಷ ರೂ ಅನುದಾನ ಬಿಡುಗಡೆಯಾಗಿದೆ.ಅನುದಾನ ಬಿಡುಗಡೆ ಪತ್ರವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ
ಯೋಜನಾಧಿಕಾರಿ ಮಾಧವ ಗೌಡ ಅವರು ದೊಡ್ಡತೋಟ ಶ್ರೀರಾಮ ಭಜನಾ ಮಂದಿರ ಸಮಿತಿಯ ಅಧ್ಯಕ್ಷರಾದ ಮಹೇಶ್ ಮೇರ್ಕಜೆ ಅವರಿಗೆ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ
ಜನಜಾಗೃತಿ ವೇದಿಕೆಯ ಮಾಜಿ ಜಿಲ್ಲಾಧ್ಯಕ್ಷ ಎನ್.ಎ.ರಾಮಚಂದ್ರ,ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ,ಚೊಕ್ಕಾಡಿ ಉಳ್ಳಾಕುಲು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಾಥ್ ನೆಲ್ಲಿಕುಂಜ, ಗ್ರಾಮಾಭಿವೃದ್ಧಿ ಯೋಜನೆಯ ವಲಯಾಧ್ಯಕ್ಷ ದಯಾನಂದ ಗುಡ್ಡೆಮನೆ, ಒಕ್ಕೂಟದ ಅಧ್ಯಕ್ಷ ಪ್ರವೀಣ್ ಮುಂಡೋಕಜೆ,ಗ್ರಾ.ಪಂ. ಮಾಜಿ ಸದಸ್ಯ ಹೂವಪ್ಪ ಗೌಡ ಆರ್ನೋಜಿ, ಶ್ರೀರಾಮ ಭಜನಾ ಮಂದಿರ ಸಮಿತಿ ಕಾರ್ಯದರ್ಶಿ ಹಾಗೂ ಚೊಕ್ಕಾಡಿ ಸಹಕಾರಿ ಸಂಘದ ಉಪಾಧ್ಯಕ್ಷ ಪ್ರವೀಣ್ ರಾವ್ ಹಾಗು ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.












