ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿ ಡಾ.ಅರುಣ್ ಕೆ.ಅವರು ಅಧಿಕಾರ ಸ್ವೀಕರಿಸಿದರು. ಎಸ್ಪಿ ಯತೀಶ್ ಎನ್. ಅಧಿಕಾರ ಹಸ್ತಾಂತರಿಸಿದರು.ಕಾನೂನು ಸುವ್ಯವಸ್ಥೆ ಕಾಪಾಡುವುದು ಜೊತೆಗೆ ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಮೊದಲ
ಆದ್ಯತೆ ನೀಡಲಾಗುವುದು. ಮತೀಯ ಪ್ರಕರಣ, ನೈತಿಕ ಪೊಲೀಸ್ ಗಿರಿ ಪ್ರಕರಣಗಳ ಬಗ್ಗೆಯೂ ಗಂಭೀರವಾಗಿ ಪರಿಗಣಿಸಲಾಗುವುದು. ಅದೇ ರೀತಿ ರೌಡಿ ಶೀಟರ್ಗಳ ಚಲನವಲನಗಳ ಮೇಲೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುವವರ ಮೇಲೆ ನಿಗಾ ಇರಿಸಲಾಗುವುದು. ಅಕ್ರಮ ಗೋಹತ್ಯೆ,ಸಾಗಾಟ, ಮಾದಕ ಪದಾರ್ಥಗಳ ಸಾಗಾಟ,ಮಾರಾಟ,ಸೇವನೆ, ಅಕ್ರಮ ಗಣಿಗಾರಿಕೆ, ಗ್ಯಾಂಬ್ಲಿಂಗ್, ಬೆಟ್ಟಿಂಗ್ ಹಾಗೂ ಇನ್ನಿತರ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ನೂತನ ಎಸ್ಪಿ ಅವರು ಹೇಳಿದ್ದಾರೆ.