ಸುಳ್ಯ: ಸುಳ್ಯದ ಶ್ರೀ ಶಾರದಾ ಪದವಿಪೂರ್ವ ಕಾಲೇಜಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕನ್ನಡ ಭಾಷೆ ಯನ್ನು ಅಭಿವೃದ್ಧಿಪಡಿಸುವ ಬಗ್ಗೆ ಜೊತೆಗೆ ತುಳು ಭಾಷೆಯನ್ನು ಪ್ರಾಚೀನ ಭಾಷೆಯನ್ನಾಗಿ ಪರಿಗಣಿಸಬೇಕೆಂದು ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿರುವ ಬಗ್ಗೆ ಮಾತನಾಡಿದರು. ಜನರು ಪ್ರಮುಖವಾಗಿ ಹಳ್ಳಿಯ ಶಾಲೆ ಮತ್ತು
ರಸ್ತೆಯ ಸಮಸ್ಯೆಗಳ ಬಗ್ಗೆ ಪ್ರತಿನಿಧಿಗಳನ್ನು ಪ್ರಶ್ನಿಸಬೇಕೆಂದು ಕರೆ ನೀಡಿದರು. ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ಅಧ್ಯಕ್ಷ ಧನಂಜಯ ಅಡ್ಪಂಗಾಯ ಸಂಸ್ಥೆಯ ಪರವಾಗಿ ಡಾ. ಪುರುಷೋತ್ತಮ ಬಿಳಿಮಲೆ ಯವರನ್ನು ಸನ್ಮಾನಿಸಿದರು.
ಅರೆಬಾಷೆ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ, ಸುಳ್ಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಚಂದ್ರಶೇಖರ ಪೇರಾಲು ನಿವೃತ್ತ ಪ್ರಾಂಶುಪಾಲ ಡಾ. ಪೂವಪ್ಪ ಕಣಿಯೂರು, ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ಪ್ರಧಾನ ಕಾರ್ಯದರ್ಶಿ ಡಾಕ್ಟರ್ ರೇವತಿ ನಂದನ್ ನಿರ್ದೇಶಕರಾದ ಎಸ್ ಆರ್ ಸೂರಯ್ಯ, ಡಾಕ್ಟರ್ ಸಾಯಿಗೀತಾ ಉಪಸ್ಥಿತರಿದ್ದರು ಸಂಸ್ಥೆಯ ಪ್ರಾಂಶುಪಾಲರಾದ ದಯಾಮಣಿ ಕೆ ಸ್ವಾಗತಿಸಿದರು ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ಅಧ್ಯಕ್ಷ ಧನಂಜಯ ಅಡ್ಪಂಗಾಯ ವಂದಿಸಿದರು.ಶ್ರೀ ಶಾರದಾ ಪ್ರೌಢಶಾಲೆ ಮತ್ತು ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನ ಎಲ್ಲಾ ಬೋಧಕ ಹಾಗೂ ಬೋಧಕೇತರ ವೃಂದದವರು ಉಪಸ್ಥಿತರಿದ್ದರು.