ಉಡುಪಿ:ಉಡುಪಿಯ ಯಕ್ಷಗಾನ ಕಲಾರಂಗವು ಪ್ರತಿವರ್ಷ ನೀಡುತ್ತಿರುವ ತಲ್ಲೂರು ಕನಕಾ ಅಣ್ಣಯ್ಯ ಪ್ರಶಸ್ತಿಯನ್ನು ಈ ವರ್ಷ ಸುಳ್ಯದ ಡಾ. ಚಂದ್ರಶೇಖರ ದಾಮ್ಲೆಯವರಿಗೆ ನೀಡಿ ಗೌರವಿಸಿದೆ. ಉಡುಪಿಯ ಐ.ವೈ.ಸಿ. ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ
ಹೊರನಾಡಿನ ಅನ್ನಪೂರ್ಣೇಶ್ವರಿ ದೇವಾಲಯದ ಧರ್ಮದರ್ಶಿ ಡಾ. ಭೀಮೇಶ್ವರ ಜೋಶಿಯವರು ದಾಮ್ಲೆ ದಂಪತಿಗಳಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ಪ್ರಶಸ್ತಿಯು ರೂಪಾಯಿ 60,000 ನಗದನ್ನು ಒಳಗೊಂಡಿದೆ.
ವಿಶ್ರಾಂತ ಉಪಕುಲಪತಿ ಪ್ರೊ. ವಿವೇಕ ರೈ ಅವರು ಅಭಿನಂದಿಸಿದರು.
ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಲಾರಂಗದ ಕಾರ್ಯದರ್ಶಿ ಮುರಳಿ ಕಡೆಕಾರ್ ಸ್ವಾಗತಿಸಿ ಪ್ರೊ. ನಾರಾಯಣ ಹೆಗಡೆ ವಂದಿಸಿದರು.













