ಸುಳ್ಯ:ಲೇಖಕ, ಅಂಕಣಕಾರ ಡಾ.ಸುಂದರ ಕೇನಾಜೆಯವರ ಅಂಕಣ ಬರಹಗಳ ಕೃತಿ “ಮಾತಿಲ್ಲದ ಮಾತು” ಬಿಡುಗಡೆ ಕಾರ್ಯಕ್ರಮ ಜ. 31ಸುಳ್ಯದ ಪ್ರೆಸ್ ನಲ್ಲಿ ನಡೆಯಲಿದೆ.ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಷ್ಕೃತ ಹಿರಿಯ ಚಿಂತಕ ಲಕ್ಷ್ಮೀಶ ತೋಳ್ಪಾಡಿ ಅವರು
ಕೃತಿ ಬಿಡುಗಡೆ ಮಾಡಲಿದ್ದಾರೆ. ಖ್ಯಾತ ವ್ಯಂಗ್ಯಚಿತ್ರಕಾರ ದಿನೇಶ್ ಕುಕ್ಕುಜಡ್ಕ ಕೃತಿ ಕುರಿತು ಮಾತನಾಡಲಿದ್ದಾರೆ. ಪ್ರೆಸ್ ಕ್ಲಬ್ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ, ಕಾರ್ಯನಿರತ ಪತ್ರಕರ್ತರ ಸಂಘದ ಸುಳ್ಯ ತಾಲೂಕು ಘಟಕದ ಅಧ್ಯಕ್ಷ ಲೋಕೇಶ್ ಪೆರ್ಲಂಪಾಡಿ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ ಯಶ್ವಿತ್ ಕಾಳಂಮನೆ, ಲೇಖಕ ಡಾ.ಸುಂದರ ಕೇನಾಜೆ ಉಪಸ್ಥಿತರಿರುತ್ತಾರೆ. ಆಸಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸಂಘಟಕರು ಕೋರಿರುತ್ತಾರೆ.












