ಸುಳ್ಯ:ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ನ ಅಧೀನದಲ್ಲಿರುವ ಕೆವಿಜಿ ಶಿಕ್ಷಣ ಸಂಸ್ಥೆಗಳ ಹಿತದೃಷ್ಠಿಯಿಂದ ಸೂಕ್ತ, ಸಲಹೆ ಸೂಚನೆ ಮಾರ್ಗದರ್ಶನ ನೀಡುವ ಉದ್ದೇಶದಿಂದ ಕೆವಿಜಿ ಪಾಲಿಟಕ್ನಿಕ್ ಕಾಲೇಜಿಗೆ ಆಡಳಿತ ಮಂಡಳಿ ಸದಸ್ಯರು ಭೇಟಿ ನೀಡಿದ್ದಾರೆ ಎಂದು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಕಾಡೆಮಿಯ ಸದಸ್ಯರಾದ
ಡಾ.ರೇಣುಕಾ ಪ್ರಸಾದ್ ಕೆ. ವಿ. ಅವರಿಗೆ ಶಿಕ್ಷೆ ಆಗಿರುವ ಹಿನ್ನಲೆಯಲ್ಲಿ ಎಲ್ಲಾ ಸಂಸ್ಥೆಗಳು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ನ ವ್ಯಾಪ್ತಿಗೆ ಬರುವುದರಿಂದ ಈ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳ, ಉದ್ಯೋಗಿಗಳು ಹಾಗೂ ಸಂಸ್ಥೆಯ ಭವಿಷ್ಯದ ಹಿತದೃಷ್ಠಿಯಿಂದ ಯಾವುದೇ ತೊಂದರೆಗಳು ಬಾರದಂತೆ ಹಾಗೂ ಸಂಸ್ಥೆಯ ಅಭಿವೃದ್ಧಿಯ ದೃಷ್ಠಿಯಿಂದ ಕ್ರಮಗಳನ್ನು ಕೈಗೊಳ್ಳಲು ಎಒಎಲ್ಇ ಸಭೆಯಲ್ಲಿ ನಿರ್ಧರಿಸಲಾಗಿದೆ. ಆ ಪ್ರಯುಕ್ತ ಪ್ರಥಮ ಹಂತದಲ್ಲಿ ಕೌನ್ಸಿಲ್ ಸದಸ್ಯರು ಕೆ.ವಿ.ಜಿ ಪಾಲಿಟೆಕ್ನಿಕ್ಗೆ ದಿನಾಂಕ ಭೇಟಿ ನೀಡಿ ಕಾಲೇಜಿನ ಪ್ರಾಂಶುಪಾಲರ ಜೊತೆಗೆ ಸಂಸ್ಥೆಯ ಪ್ರಗತಿಯ ಬಗ್ಗೆ ಚರ್ಚಿಸಿದ್ದೇವೆ. ಹಾಗೂ ಈ ಸಂಸ್ಥೆಯ ಉದ್ಯೋಗಿಗಳು, ವಿದ್ಯಾರ್ಥಿಗಳು ಹಾಗೂ ಸಂಸ್ಥೆಯ ಹಿತದೃಷ್ಟಿಯಿಂದ ಉತ್ತಮವಾಗಿ
ನಡೆಸಿಕೊಂಡು ಬರಲು ಮಾರ್ಗದರ್ಶನ ಹಾಗೂ ಸಲಹೆ ಸೂಚನೆಗಳನ್ನು ನೀಡಲಾಗಿದೆ. ಹಾಗೂ ಇತ್ತೀಚೆಗೆ ನಡೆದ ವಿದ್ಯಾಮಾನಗಳ ಬಗ್ಗೆ ಚರ್ಚಿಸಲಾಯಿತು. ಈ ಸಭೆಯಲ್ಲಿ ಕೇವಲ ಸಂಸ್ಥೆಯ ಹಿತದೃಷ್ಟಿಯನ್ನು ಕಾಪಾಡುವ ಬಗ್ಗೆ ಮಾತ್ರ ಚರ್ಚಿಸಲಾಗಿದೆ ಎಂದು ಅವರು ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಅಕಾಡೆಮಿ ಉಪಾಧ್ಯಕ್ಷೆ ಶೋಭಾ ಚಿದಾನಂದ, ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ. ನಿರ್ದೇಶಕರಾದ ಐಶ್ವರ್ಯ, ಕೆ.ವಿ.ಹೇಮನಾಥ್ ಉಪಸ್ಥಿತರಿದ್ದರು.