ಮಂಗಳೂರು:ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಸ್ಪಷ್ಟ ಬಹುಮತ ದೊರೆಯುವ ವಿಶ್ವಾಸ ಇಸ ಎಂದು ರಾಜ್ಯ ಸಭಾ ಸದಸ್ಯರು,ವಿಪಕ್ಷ ಸಚೇತಕರು, ಎಐಸಿಸಿ ಕಾರ್ಯಕಾರಿಣಿ ಸದಸ್ಯರಾದ ಡಾ. ನಾಸೀರ್ ಹುಸೇನ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಿಝೋರಾಂ, ಛತ್ತೀಸ್ಗಡ ಮಧ್ಯಪ್ರದೇಶ, ರಾಜಸ್ಥಾನ ಮತ್ತು ತೆಲಂಗಾಣ ವಿಧಾನ ಸಭೆಗಳಿಗೆ
ಮುಂದಿನ ತಿಂಗಳು ನಡೆಯಲಿರುವ ಚುನಾವಣೆಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರಲಿದೆ ಎಂದು ಹೇಳಿದರು. ದೇಶದ ರಾಜಕೀಯ ಸ್ಥಿತಿಗತಿ, ಪಂಚ ರಾಜ್ಯಗಳ ವಿಧಾನ ಚುನಾವಣೆ, ಲೋಕಸಭಾ ಚುನಾವಣೆ ಎದುರಿಸಲು ಇರುವ ಸವಾಲು, ರಣತಂತ್ರ ಬಗ್ಗೆ ಚರ್ಚೆ ನಡೆದಿದೆ ಎಂದರು. ನಮ್ಮ ಸರ್ವೆ ಪ್ರಕಾರ ಕಾಂಗ್ರೆಸ್ ಐದು ರಾಜ್ಯಗಳಲ್ಲಿ ಗರಿಷ್ಠ ಸ್ಥಾನಗಳನ್ನು ಗೆಲ್ಲುವುದರ ಮೂಲಕ ಆಡಳಿತದ ಚುಕ್ಕಾಣಿ ಹಿಡಿಯಲಿದೆ ಎಂದು ಹೇಳಿದರು.ಭಾರತ ಜೋಡೊ ಯಾತ್ರೆ ಮೂಲಕ ದೇಶದ ಜನರನ್ನು ಒಂದುಗೂಡಿಸುವ ಪ್ರಯತ್ನ ನಡೆದಿದೆ. ಅಲ್ಪ ಸಂಖ್ಯಾತರಿಗೆ ಕಾಂಗ್ರೆಸ್ನಲ್ಲಿ ಪ್ರಾತಿನಿಧ್ಯ ಸಿಕ್ಕಿದಂತೆ ಯಾವುದೇ ಪಕ್ಷದಲ್ಲೂ ಸಿಕ್ಕಿಲ್ಲ ಎಂದು ಹೇಳಿದರು.
ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಕೆ.ಅಬ್ದುಲ್ ಜಬ್ಬಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿ ಸೋಜ, ಮಾಜಿ ಶಾಸಕ ಜೆ.ಆರ್.ಲೋಬೊ, ಪಕ್ಷದ ಧುರೀಣರಾದ ಜಿ.ಎ. ಬಾವ, ಯು.ಕೆ.ಮೋನು, ಇಬ್ರಾಹೀಂ ಕೋಡಿಜಾಲ್, ಶಾಹುಲ್ ಹಮೀದ್, ಬಿ.ಎಚ್.ಖಾದರ್, ಮಮತಾ ಗಟ್ಟಿ, ಕೃಪಾ ಆಲ್ವ, ಪದ್ಮರಾಜ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.