ಬೆಂಗಳೂರು:ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿ ಸುಳ್ಯದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ ಕಮಿಟಿ ಬಿ ಅಧ್ಯಕ್ಷರಾದ ಡಾ.ಕೆ.ವಿ.ರೇಣುಕಾಪ್ರಸಾದ್ ಕೆ.ವಿ. ಅವರು ಪುನರಾಯ್ಕೆಯಾಗಿದ್ದಾರೆ. ರಾಜ್ಯ ಒಕ್ಕಲಿಗರ ಸಂಘಧ ಪಧಾಧಿಕಾರಿಗಳು ಬದಲಾಗಿದ್ದು ನೂತನ

ಪದಾಧಿಕಾರಿಗಳ ಆಯ್ಕೆ ನಡೆದಿದ್ದು ಡಾ.ರೇಣುಕಾಪ್ರಸಾದ್ ಕೆ.ವಿ. ಅವರು ಉಪಾಧ್ಯಕ್ಷರಾಗಿ ಸರ್ವಾನುಮತದಿಂದ ಪುನರಾಯ್ಕೆಯಾಗಿದ್ದಾರೆ. ನಾಲ್ಕನೇ ಬಾರಿಗೆ ಅವರು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ರಾಜ್ಯ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಎಲ್.ಶ್ರೀನಿವಾಸ್ ನೂತನ ಉಪಾಧ್ಯಕ್ಷರಾಗಿ ಡಾ.ರೇಣುಕಾಪ್ರಸಾದ್ ಕೆ.ವಿ., ಎಂ.ಪುಟ್ಟಸ್ವಾಮಿ, ಪ್ರಧಾನ ಕಾರ್ಯದರ್ಶಿಯಾಗಿ ಗಂಗಾಧರ ಸಿ.ಜಿ.,ಸಹ ಕಾರ್ಯದರ್ಶಿಯಾಗಿ ಡಿ.ಕೆ.ರಮೇಶ್, ಕೋಶಾಧಿಕಾರಿಯಾಗಿ ಕೆ.ವಿ.ಶ್ರೀಧರ್ ಆಯ್ಕೆಯಾಗಿದ್ದಾರೆ ಎಂದು ತಿಳಿದು ಬಂದಿದೆ.













