ಸುಳ್ಯ:ಬೆಂಗಳೂರು ಶ್ರೀ ವೆಂಕಟೇಶ್ವರ ಕಾಲೇಜ್ ಆಫ್ ಇಂಜಿನಿಯರಿಂಗ್ನ(ಸ್ವಾಯತ್ತ) ಗವರ್ನಿಂಗ್ ಕೌನ್ಸಿಲ್ ಸದಸ್ಯರಾಗಿ ವಿಟಿಯು ಬೆಳಗಾವಿಯಿಂದ ಡಾ. ಉಜ್ವಲ್ ಯು.ಜೆ ನೇಮಕಗೊಂಡಿದ್ದಾರೆ.
ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು, ವಿ.ಟಿ.ಯು ಎಕ್ಸಿಕ್ಯುಟಿವ್ ಕೌನ್ಸಿಲ್ ಸದಸ್ಯರು, ಆರ್.ವಿ. ಇಂಜಿನಿಯರಿಂಗ್ ಕಾಲೇಜ್, ಬೆಂಗಳೂರು ಇದರ
ಗವರ್ನಿಂಗ್ ಕೌನ್ಸಿಲ್ ಸದಸ್ಯರು ಅಲ್ಲದೆ ಎಲ್.ಐ.ಸಿ. ಚೇರ್ಮೆನ್/ಸದಸ್ಯರು, ವಿ.ಟಿ.ಯು. ಬೆಳಗಾವಿ ಆಗಿರುವ ಡಾ. ಉಜ್ವಲ್ ಊರುಬೈಲು ಇವರನ್ಬು ಶ್ರೀ ವೆಂಕಟೇಶ್ವರ ಕಾಲೇಜ್ ಆಫ್ ಇಂಜಿನಿಯರಿಂಗ್, ಬೆಂಗಳೂರು (ಸ್ವಾಯತ್ತ) ಇದರ ಗವರ್ನಿಂಗ್ ಕೌನ್ಸಿಲ್ ಸದಸ್ಯರಾಗಿ ವಿಟಿಯು ಬೆಳಗಾವಿಯಿದ ಉಪಕುಲಪತಿಗಳ ನಿರ್ದೇಶನದಂತೆ ಮುಂದಿನ 2 ವರ್ಷಗಳ ಅವಧಿಗೆ ನಾಮನಿರ್ದೇಶನಗೊಂಡಿರುತ್ತಾರೆ.
ಇವರನ್ನು ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷ, ಚೇರ್ಮೆನ್ ಕಮಿಟಿ ‘ಬಿ’ ಎ.ಒ.ಎಲ್.ಇ. ಡಾ. ರೇಣುಕಾಪ್ರಸಾದ್ ಕೆ.ವಿ, ಎ.ಒ.ಎಲ್.ಇ ಕಮಿಟಿ ‘ಬಿ’ಯ ಕಾರ್ಯದರ್ಶಿ ಜ್ಯೋತಿ ಆರ್. ಪ್ರಸಾದ್, ನಿರ್ದೇಶಕರಾದ ಡಾ. ಅಭಿಜ್ಞ ಕೆ.ಆರ್.,ಮೌರ್ಯ ಆರ್. ಕುರುಂಜಿ, ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ ವಿ. ಉಪಪ್ರಾಂಶುಪಾಲ ಡಾ. ಶ್ರೀಧರ್ ಕೆ. ಹಾಗೂ ಎಲ್ಲ ಸಿಬ್ಬಂದಿ ವರ್ಗದವರು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.









