ಸುಳ್ಯ: ರಾಷ್ಟ್ರದ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜುಗಳಲ್ಲೊಂದಾದ ಬೆಂಗಳೂರಿನ ಆರ್ವಿ ಇಂಜಿನಿಯರಿಂಗ್ ಕಾಲೇಜಿನ ಗವರ್ನಿಂಗ್ ಕೌನ್ಸಿಲ್ ಸದಸ್ಯರಾಗಿ ಡಾ.ಉಜ್ವಲ್ ಊರುಬೈಲು ಅವರು ನೇಮಕಗೊಂಡಿದ್ದಾರೆ.ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಮತ್ತು ಕೆ.ವಿ.ಜಿ. ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ. ಉಜ್ವಲ್ ಊರುಬೈಲು ಇವರನ್ನು ರಾಷ್ಟ್ರದ ಪ್ರತಿಷ್ಠಿತ ಇಂಜಿನಿಯರಿಂಗ್

ಕಾಲೇಜ್ಗಳಲ್ಲೊಂದಾದ ಬೆಂಗಳೂರಿನ ಆರ್ವಿ ಇಂಜಿನಿಯರಿಂಗ್ ಕಾಲೇಜಿನ ಗವರ್ನಿಂಗ್ ಕೌನ್ಸಿಲ್ ಸದಸ್ಯರಾಗಿ ಉಪಕುಲಪತಿಗಳು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ ಇವರ ಅನುಮೋದನೆಯೊಂದಿಗೆ ನೇಮಕಗೊಳಿಸಿದ್ದಾರೆ. ಇವರ ಸೇವಾವಧಿ ಮುಂದಿನ 2 ವರ್ಷಗಳಾಗಿದ್ದು (2023-2025) ಕಾಲೇಜಿನ ಆಡಳಿತಾತ್ಮಕ ನಿರ್ಧಾರಗಳನ್ನು ಕೈಗೊಳ್ಳುವ ಪರಮೋಚ್ಚ ಸಮಿತಿ ಇದಾಗಿದೆ. ಇವರನ್ನು ಡಾ.ರೇಣುಕಾಪ್ರಸಾದ್ ಕೆ.ವಿ. ಮತ್ತು ಕೆ.ವಿ.ಜಿ. ವಿದ್ಯಾಸಂಸ್ಥೆಗಳ ಪ್ರಾಂಶುಪಾಲರು ಹಾಗೂ ಸಿಬ್ಬಂಧಿ ವರ್ಗದವರು ಅಭಿನಂದಿಸಿರುತ್ತಾರೆ.