ಧರ್ಮಸ್ಥಳ: ಧರ್ಮಸ್ಥಳದಲ್ಲಿ ಮಂಗಳವಾರ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 78ನೆ ಜನ್ಮದಿನವನ್ನು ಸರಳವಾಗಿ ಸಂಭ್ರಮ-ಸಡಗರದಿಂದ ಆಚರಿಸಲಾಯಿತು.ದೇವಳ ನೌಕರರು, ಊರಿನ ನಾಗರಿಕರು, ವಿವಿಧ ಸಂಘ-ಸಂಸ್ಥೆಗಳವರು ಹೆಗ್ಗಡೆಯವರಿಗೆ ಫಲಪುಷ್ಪ ಹಾರ ಅರ್ಪಿಸಿ ಶ್ರದ್ಧಾಭಕ್ತಿಯಿಂದ ಶುಭ ಹಾರೈಕೆಗಳನ್ನು ಅರ್ಪಿಸಿದರು.
ಮೂಡಬಿದ್ರೆಯ
ಜೈನಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹೆಗ್ಗಡೆಯವರಿಗೆ ವಿಶೇಷ ಪೂಜೆಯ ಪ್ರಸಾದ ನೀಡಿ ಆಶೀರ್ವದಿಸಿದರು.
ಮಾಣಿಲದ ಮೋಹನದಾಸ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಪೆರಿಂಜೆ ಪಡ್ಯಾರಬೆಟ್ಟ ಕೊಡಮಣಿತ್ತಾಯ ದೈವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಜೀವಂಧರ ಜೈನ್ ಮತ್ತು ಪುತ್ರರು, ಎಸ್.ಡಿ. ಸಂಪತ್ ಸಾಮ್ರಾಜ್ಯ ಶಿರ್ತಾಡಿ ಮೊದಲಾದವರು ಹೆಗ್ಗಡೆಯವರಿಗೆ ಜನ್ಮದಿನದ ಶುಭ ಹಾರೈಕೆಗಳನ್ನು ಅರ್ಪಿಸಿದರು.
ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿಯವರು ಮಠದಲ್ಲಿಯೆ ಹೆಗ್ಗಡೆಯವರ ಹುಟ್ಟುಹಬ್ಬಕ್ಕೆ ವಿಶೇಷವಾಗಿ ಶುಭ ಹಾರೈಸಿದರು.
ಪ್ರಧಾನಿ, ರಾಷ್ಟ್ರಪತಿ ಹಾರೈಕೆ:
ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ, ರಾಷ್ಟ್ರಪತಿ ದ್ರೌಪದಿಮುರ್ಮು ಅವರಿಂದ ಹೆಗ್ಗಡೆಯವರಿಗೆ ಜನ್ಮದಿನದ ಶೂಭಾಶಯ ಕೋರಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಪತ್ರ ಮೂಲಕ ಜನ್ಮದಿನದ ಶುಭಾಶಯ ಕಳುಹಿಸಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡಾ ಹೆಗ್ಗಡೆಯವರಿಗೆ ಪತ್ರ ಮೂಲಕ ಜನ್ಮದಿನದ ಶುಭಾಶಯ ಕಳುಹಿಸಿದ್ದಾರೆ.
ಗೃಹಸಚಿವ ಅಮಿತ್ ಶಾ ಕೂಡಾ ದೂರವಾಣಿ ಮೂಲಕ ಜನ್ಮದಿನದ ಶುಭಾಶಯ ಕೋರಿದ್ದಾರೆ.












