ಧರ್ಮಸ್ಥಳ:ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಕರ್ನಾಟಕ ರಾಜ್ಯದಲ್ಲಿ ಗ್ರಾಮಾಭಿವೃದ್ಧಿಗೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಭಾರತೀಯ ಜೀವ ವಿಮಾ ನಿಗಮವು ತಮ್ಮ ವಿಮಾ ಸೇವೆಯನ್ನು ಗ್ರಾಮ ಗ್ರಾಮಗಳಿಗೆ ನೀಡುತ್ತಿರುವ ಪಾಲುದಾರ ಸಂಸ್ಥೆಯಾದ ಗ್ರಾಮಾಭಿವೃದ್ಧಿ ಯೋಜನೆಯೊಂದಿಗೆ ಜಂಟಿಯಾಗಿ ಸೇರಿಕೊಂಡು ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಅಂಚೆ ಚೀಟಿಯನ್ನು
ಬಿಡುಗಡೆಗೊಳಿಸಲಾಯಿತು. ಹೆಗ್ಗಡೆಯವರ ಜನ್ಮ ದಿನದಂದು ಹೆಗ್ಗಡೆಯವರ ಅಂಚೆ ಚೀಟಿಯನ್ನು ಶ್ರೀ ಬಿಡುಗಡೆಗೊಳಿಸಲಾಗಿದೆ. ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ. ಎಪಿಜೆ ಅಬ್ದುಲ್ ಕಲಾಂರವರ ಮೊಮ್ಮಗ, ಡಾ. ಎಪಿಜೆ ಅಬ್ದುಲ್ ಕಲಾಂ ಪ್ರತಿಷ್ಠಾನದ ಸಹಸ್ಥಾಪಕರು ಮತ್ತು ವ್ಯವಸ್ಥಾಪಕ ಟ್ರಸ್ಟಿಗಳಾದ ಎಪಿಜೆಎಂಜೆ ಶೇಯ್ಕ್ ಸಲೀಂರವರು ಅಬ್ದುಲ್ ಕಲಾಂ ಮತ್ತು ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಚಿಂತನೆಗಳು ಸಮಾನಾಗಿದೆ ಎಂದರು.

ಮರ್ಸಿಡಿಸ್ ಬೆಂಝ್ ಕಾರು ಕಂಪನಿಯ ಪ್ರಧಾನ ವ್ಯವಸ್ಥಾಪಕರಾದ ಸಂಜಯ್ ಕೊಚರ್,ಉಡುಪಿಯ ಮುಖ್ಯ ಅಂಚೆ ಅಧಿಕ್ಷಕರಾದ ರಮೇಶ್ ಪ್ರಭು,ಭಾರತೀಯ ಜೀವ ವಿಮಾ ನಿಗಮದ ದಕ್ಷಿಣ ವಲಯದ ಹಿರಿಯ ವಲಯಾಧಿಕಾರಿ ಪುನಿತ್ ಕುಮಾರ್ ಮಾತನಾಡಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿದರು. ಹೇಮಾವತಿ ವೀ. ಹೆಗ್ಗಡೆ, ಕ್ಷೇಮವನದ ಕಾರ್ಯನಿರ್ವಹಣಾಧಿಕಾರಿ ಶ್ರದ್ಧಾ ಅಮಿತ್, ಯೋಜನೆಯ ಟ್ರಸ್ಟಿಗಳಾದ ಉದಯ ಕುಮಾರ್ ಶೆಟ್ಟಿ, ಸಂಪತ್ ಸಾಮ್ರಾಜ್ಯ, ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಅನಿಲ್ ಕುಮಾರ್ ಎಸ್.ಎಸ್., ಪುತ್ತೂರು ಅಂಚೆ ಅಧೀಕ್ಷಕರಾದ ಕೆ. ರವೀಂದ್ರ ನಾಯಕ್ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು. ಎಲ್ಐಸಿಯ ಉಡುಪಿ ವಿಭಾಗದ ಹಿರಿಯ ವಿಭಾಗಾಧಿಕಾರಿ ಗಣಪತಿ ಎನ್. ಭಟ್ ಸ್ವಾಗತಿಸಿದರು. ಭಾರತೀಯ ಜೀವ ವಿಮಾ ನಿಗಮ ಉಡುಪಿ ವಿಭಾಗದ ಮೈಕ್ರೋ ಇನ್ಶುರೆನ್ಸ್ ಮೆನೆಜರ್ ದಿನೇಶ್ ಪ್ರಭು ಧನ್ಯವಾದವಿತ್ತರು. ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಮನೋಜ್ ಮಿನೆಜಸ್ ನಿರೂಪಿಸಿದರು.












