ಸುಳ್ಯ:ಸುಳ್ಯ ನಗರ ಸೇರಿದಂತೆ ತಾಲೂಕಿನ ವಿವಿಧ ಕಡೆಗಳಲ್ಲಿ ಮಳೆಯಾಗಿದೆ. ಸುಳ್ಯ ನಗರದಲ್ಲಿ ಜ.3ರಂದು ಬೆಳಿಗ್ಗೆ ಹನಿ ಮಳೆಯಾಗಿದೆ. ಮೋಡ ಕವಿದ ವಾತಾವರಣ ಇದ್ದು ಕತ್ತಲು ಕವಿದಿದೆ. ಬೆಳಿಗ್ಗಿನಿಂದ ತುಂತುರು ಮಳೆಯಾಗಿದೆ. ಮಂಗಳವಾರವೂ ಮೋಡ ಕವಿದ ವಾತಾವರಣ ಇತ್ತು. ತಿಂಗಳಿಗೂ ಹೆಚ್ಚು ಸಮಯದಿಂದ
ಮಳೆ ದೂರವಾಗಿತ್ತು. ಇದೀಗ ಹೊಸ ವರ್ಷಾರಂಭದಲ್ಲೇ ಮಳೆ ಸಿಂಚನವಾಗಿದೆ.
ಈ ಮಧ್ಯೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜನವರಿ 9ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದಾದ್ಯಂತ ಶೀತಗಾಳಿ ಬೀಸುತ್ತಿದ್ದು ಮಳೆಯಾಗುವ ಸಂಭವ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ 5-6 ದಿನಗಳ ಕಾಲ ಮೋಡ ಕವಿದ ವಾತಾವರಣ ಇದ್ದು ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಜನವರಿ 7ರಿಂದ 9ರವರೆಗೆ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆ ಇದೆ ಎಂಬ ಸೂಚನೆ ನೀಡಿದೆ.














