ಸುಳ್ಯ:ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ಹಾಗೂ ಸುಳ್ಯ,ಬೆಳ್ಳಾರೆ, ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ವತಿಯಿಂದ ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕರ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನವನನ್ನು ಆಚರಿಸಲಾಯಿತು. ಈ ಪ್ರಯುಕ್ತ ಸುಳ್ಯ ನಗರದಲ್ಲಿ ಮಾದಕ ದ್ರವ್ಯ ವಿರೋಧಿ ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಯಿತು. ಮಾದಕ ವಸ್ತುಗಳ ಸೇವನೆ ಹಾಗೂ
ಅದರಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಿಗೆ ಅರಿವು, ಜಾಗೃತಿ ಮೂಡಿಸುವ ಸಲುವಾಗಿ ವಿವಿಧ ಸಂಘ ಸಂಸ್ಥೆಗಳು ಹಾಗೂ ಶಾಲಾ ಕಾಲೇಜುಗಳ ವಿದ್ಯಾರ್ಥಿ ಅಧ್ಯಾಪಕರುಗಳ ನೇತೃತ್ವದಲ್ಲಿ ಸುಳ್ಯದ ಜ್ಯೋತಿ ಸರ್ಕಲ್ನಿಂದ ಗಾಂಧಿನಗರದ ವರೆಗೆ ನಗರದಲ್ಲಿ ಕಾಲ್ನಡಿಗೆ ಜಾಥಾವನ್ನು ಹಮ್ಮಿಕೊಳ್ಳಲಾಯಿತು.

ಕೆವಿಜಿ ಕಾನೂನು ಮಹಾ ವಿದ್ಯಾಲಯದ ಆಡಳಿತಾಧಿಕಾರಿ, ನಿವೃತ್ತ ಪ್ರಾಂಶುಪಾಲ ಪ್ರೊ. ದಾಮೋದರ ಗೌಡ ಜಾಥಾಕ್ಕೆ ಚಾಲನೆ ನೀಡಿದರು.ಸುಳ್ಯ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ಠಾಣೆಯ ಆರಕ್ಷಕ ಉಪ ನಿರೀಕ್ಷಕರಾದ ಸಂತೋಷ್, ಸರಸ್ವತಿ, ಬೆಳ್ಳಾರೆ ಆರಕ್ಷಕ ಉಪ ನಿರೀಕ್ಷಕರಾದ ಈರಯ್ಯ ದೂಂತೂರು,ಸುಬ್ರಹ್ಮಣ್ಯ ಠಾಣಾಧಿಕಾರಿ ಕಾರ್ತಿಕ್,
ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದಿದರೆ, ಸ್ಥಾಯಿ ಸಮಿತಿ ಅಧ್ಯಕ್ಷೆ ಕಿಶೋರಿ ಶೇಟ್ ಸದಸ್ಯರಾದ ಎಂ.ವೆಂಕಪ್ಪ ಗೌಡ, ಕೆ.ಎಸ್.ಉಮ್ಮರ್, ಶೀಲಾ ಅರುಣ ಕುರುಂಜಿ, ಮುಖ್ಯಾಧಿಕಾರಿ ಸುಧಾಕರ ಎಂ.ಎಚ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ಪ್ರೆಸ್ ಕ್ಲಬ್ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ, ಪ್ರಮುಖರಾದ ಕುಸುಮಾಧರ ಎ.ಟಿ, ಚೆನ್ನಕೇಶವ ಜಾಲ್ಸೂರು, ಪ್ರಭಾಕರನ್ ನಾಯರ್.ಸಿ.ಎಚ್, ಐಟಿಐ ಕಾಲೇಜಿನ ಪ್ರಾಂಶುಪಾಲರಾದ ಚಿದಾನಂದ ಬಾಳಿಲ, ದಿನೇಶ್ ಮಡ್ತಿಲ, ಭಾಸ್ಕರ ಕೇನಾಜೆ,ರೋಟರಿ ಕ್ಲಬ್ ಅಧ್ಯಕ್ಷ ಡಾ.ರಾಮ್ಮೋಹನ್, ವಿವಿಧ ಶಾಲಾ ಕಾಲೇಜುಗಳ ಉಪನ್ಯಾಸಕರು, ಅಧ್ಯಾಪಕರು, ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು.