ಸುಳ್ಯ:ತುಳು ದೇಶದಲ್ಲಿಯೇ ಅತ್ಯಂತ ವಿಶೇಷವಾದ ಭಾಷೆ ಮತ್ತು ಸಂಸ್ಕೃತಿ. ತುಳು ಭಾಷೆ ಹಾಗು ಸಂಸ್ಕೃತಿಗೆ ಮೊಗೇರ ಸಮುದಾಯದ ಕೊಡುಗೆ ಅನನ್ಯವಾದುದು ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದ್ದಾರೆ.ಕರ್ನಾಟಕ ರಾಜ್ಯ ಮೊಗೇರ ಸಂಘದ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಸುಳ್ಯದ ಕೊಡಿಯಾಲಬೈಲು ಗೌಡ ಸಮುದಾಯ ಭವನದಲ್ಲಿ ನಡೆದ ‘ಮೊಗೇರ ದುಡಿ ಆಯನ-2026’ ಕಾರ್ಯಕ್ರಮದ ಸಂಗವಾಗಿ ನಡೆದ ಬಹಿರಂಗ ಸಭೆಯಲ್ಲಿ
ಮುಖ್ಯ ಅತಿಥಿಯಾಗಿ ಮಾತನಾಡಿದರು. ಮಣ್ಣಿನ ಸಂಸ್ಕೃತಿಯ ಜೊತೆಗೆ ಬದುಕಿ ಸನಾತನ ಸಂಸ್ಕೃತಿಯನ್ನು ಜೀವಂತವಾಗಿರಿಸಿದವರು ಮೊಗೇರ ಸಮುದಾಯ ಎಂದ ಅವರು ಎಲ್ಲರೂ ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಕೊಡುಗೆ ನೀಡಿದರೆ ಉತ್ತಮ ಸಮಾಜ, ದೇಶ ನಿರ್ಮಾಣ ಮಾಡಲು ಸಾಧ್ಯ, ತುಳು ನಾಡಿನಿಂದ ದೇಶಕ್ಕೆ ಮಾದರಿ ಕೊಡುಗೆ ನೀಡಬೇಕು ಅದಕ್ಕಾಗಿ ಧೈರ್ಯದಿಂದ ಮತ್ತು ಆತ್ಮ ವಿಶ್ವಾಸದಿಂದ ಮುನ್ನಡೆಯಬೇಕು ಎಂದು ಹೇಳಿದರು.
ಮುಖ್ಯ ಅತಿಥಿಯಾಗಿದ್ದ ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ’ ಎಲ್ಲರೂ ಒಗ್ಗಟ್ಟಿನಿಂದ ಮುನ್ನಡೆಯಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು, ಬದುಕು, ಮನುಷ್ಯತ್ವ ಕಲಿಸಬೇಕು ಎಂದು ಹೇಳಿದರು.

ಕರ್ನಾಟಕ ರಾಜ್ಯ ಮೊಗೇರ ಸಂಘದ ಅಧ್ಯಕ್ಷ ಹಾಗೂ ಸ್ವಾಗತ ಸಮಿತಿಯ ಅಧ್ಯಕ್ಷರಾದ ನಂದರಾಜ ಸಂಕೇಶ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಎಸ್.ಅಂಗಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಮಾಜಿ ಅಧ್ಯಕ್ಷ ಪಿ.ಸಿ.ಜಯರಾಮ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಜೆಡಿಎಸ್ ಅಧ್ಯಕ್ಷ ಸುಕುಮಾರ್ ಕೊಡ್ತುಗುಳಿ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಡಾ.ರಘು ಬೆಳ್ಳಿಪ್ಪಾಡಿ, ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ.ಮುಸ್ತಫ, ವೆನ್ಲಾಕ್ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ರತ್ನಾವತಿ, ದುಡಿ ಆಯನ ಸ್ವಾಗತ ಸಮಿತಿಯ

ಗೌರವಾಧ್ಯಕ್ಷರಾದ ವಿಶ್ವನಾಥ ಬಿ, ಸುಂದರ ಮೇರ, ಮೊಗೇರ ಸಂಘದ ಉಡುಪಿ ಜಿಲ್ಲಾಧ್ಯಕ್ಷ ಅಪ್ಪು ಮರ್ಣೆ, ಕೊಡಗು ಜಿಲ್ಲಾಧ್ಯಕ್ಷ ಜನಾರ್ದನ ಮರಗೋಡು, ಹಾಸ ಜಿಲ್ಲಾಧ್ಯಕ್ಷ ಕೃಷ್ಣ ಕಾಟಳ್ಳಿ, ಕಾಸರಗೋಡು ಜಿಲ್ಲಾ ಮೊಗೇರ ಸರ್ವೀಸ್ ಸೊಸೈಟಿಯ ಅಧ್ಯಕ್ಷ ಚಂದ್ರ ಸಿ.ಬಿ, ಕಾಸರಗೋಡು ಜಿಲ್ಲಾಧ್ಯಕ್ಷ ನಿಟ್ಟೋಣಿ ಬಂದ್ಯೋಡು, ಗೌರವಾಧ್ಯಕ್ಷ
ರಾಮಪ್ಪ ಮಂಜೇಶ್ವರ, ಸುಳ್ಯ ತಾಲೂಕು ಮೊಗೇರ ಯುವ ವೇದಿಕೆಯ ಅಧ್ಯಕ್ಷ ಲಕ್ಷ್ಮಣ ಪಾರೆ, ಮೊಗೇರ ಸಂಘದ ಮಂಗಳೂರು ತಾಲೂಕು ಸಂಘದ ಅಧ್ಯಕ್ಷ ಸೀತಾರಾಮ ಕೊಂಚಾಡಿ, ಸುಳ್ಯ ತಾಲೂಕು ಪ್ರಧಾನ ಕಾರ್ಯದರ್ಶಿ ಬಾಳಪ್ಪ ಮಣಿಮಜಲು, ಸ್ವಾಗತ ಸಮಿತಿಯ ಸಂಚಾಲಕ ಅಚ್ಚುತ ಮಲ್ಕಜೆ, ಕೇಶವ ಮಾಸ್ಟರ್ ಹೊಸಗದ್ದೆ,ಶಂಕರ ಪೆರಾಜೆ ಮತ್ತಿತರರು ಉಪಸ್ಥಿತರಿದ್ದರು.
ಸುಳ್ಯ ತಾಲೂಕು ಮೊಗೇರ ಸಂಘದ ಅಧ್ಯಕ್ಷ ಹಾಗು ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷ ಕರುಣಾಕರ ಪಲ್ಲತಡ್ಕ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಎನ್.ಚಿತ್ತರಂಜನ್ ದಾಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಚಾಲಕ ಅಶೋಕ್ ಕೊಂಚಾಡಿ ವಿಷಯ ಮಂಡಿಸಿದರು.
ಬಹಿರಂಗ ಸಭೆಗೆ ಮುನ್ನ ಸುಳ್ಯದ ಜ್ಯೋತಿ ವೃತ್ತದಿಂದ ಚೆನ್ನಕೇಶವ ದೇವಸ್ಥಾನದವರೆಗೆ ಆಕರ್ಷಕ ವರ್ಣರಂಜಿತ ಮೆರವಣಿಗೆ ನಡೆಯಿತು. ಸ್ಥಬ್ಧಚಿತ್ರ, ತಾಲೀಮ್ ಪ್ರದರ್ಶನ. ಹುಲಿವೇಶ, ಗೊಂಬೆನೃತ್ಯಗಳು, ವಾದ್ಯಗೋಷ್ಠಿ ಇತ್ಯಾದಿಗಳನ್ನೊಳಗೊಂಡಂತೆ ವರ್ಣರಂಜಿತ ಮೆರವಣಿಗೆ ನಡೆಯಿತು.








