ಬೆಂಗಳೂರು: ಯಾವುದೇ ಕಾರಣಕ್ಕೂ ಕಾಂಗ್ರೆಸ್ಗೆ ಸೇರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಹೇಳಿದ್ದಾರೆ.
ಗುರುವಾರ ಬೆಂಗಳೂರಿನ ತಮ್ಮ ನಿವಾಸದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸದಾನಂದ ಗೌಡರು ಲೋಕಸಭಾ ಟಿಕೆಟ್ ಕೈತಪ್ಪಿದ ಹಿನ್ನಲೆಯಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಾರೆ ಎಂಬ ಊಹಾಪೋಹಗಳಿಗೆ ತೆರೆ ಎಳೆದರು.ನನಗೆ ಕಾಂಗ್ರೆಸ್ ನಿಂದ
ಆಹ್ವಾನ ಬಂದಿರುವುದು ಸತ್ಯ. ಆದರೆ ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.ರಾಜ್ಯ ಬಿಜೆಪಿಯೂ ತಮ್ಮ ಕುಟುಂಬ ಮತ್ತು ಚೇಲಾಗಳಿಗೆ ಸೀಮಿತವಾಗಿದ್ದು, ಇದು ಬದಲಾಗಬೇಕಾಗಿದೆ. ಕರ್ನಾಟಕದ ಬಿಜೆಪಿಯೂ ಶುದ್ಧೀಕರಣಗೊಂಡು ಮೋದಿ ಪರಿವಾರ ಆಗಬೇಕಿದೆ ಎಂದರು. ನನಗೆ ಬಿಜೆಪಿ ಟಿಕೆಟ್ ತಪ್ಪಿದ್ದಕ್ಕೆ ನೋವಾಗಿದೆ. ಆದರೆ ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷವನ್ನು ತೊರೆಯುವುದಿಲ್ಲ. ಮುಂದೆ ನನ್ನ ಮುಖ್ಯ ಉದ್ದೇಶ ಕರ್ನಾಟಕ ರಾಜ್ಯದಲ್ಲಿ ಬಿಜೆಪಿಯನ್ನು ಶುದ್ಧೀಕರಣ ಮಾಡುವುದು ಎಂದರು.








