ಬೆಂಗಳೂರು : ಕನ್ನಡ ಚಿತ್ರ ರಂಗದ ಹಿರಿಯ ನಟ ದ್ವಾರಕೀಶ್(81) ಅವರು ಮಂಗಳವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕನ್ನಡ ಚಿತ್ರರಂಗದ ಹಲವು ಖ್ಯಾತ ನಟರೊಂದಿಗೆ ನಟಿಸಿರುವ ದ್ವಾರಕೀಶ್ ಅವರು ಅನೇಕ ಪಾತ್ರಗಳನ್ನು ನಿರ್ವಹಿಸಿದ್ದಾರೆ.ದ್ವಾರಕೀಶ್ ಅಚರು
1942 ಆಗಸ್ಟ್ 19ರಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಜನಿಸಿದರು. ಇವರ ತಂದೆ ಶಾಮರಾವ್ ಮತ್ತು ತಾಯಿ ಜಯಮ್ಮ. ದ್ವಾರಕೀಶ್ ಅವರು 1964ರಲ್ಲಿ ವೀರ ಸಂಕಲ್ಪ ಎಂಬ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ದ್ವಾರಕೀಶ್ ಅವರು ವಿಷ್ಣುವರ್ಧನ್ ಅವರೊಂದಿಗೆ ನಟಿಸಿದ ಚಿತ್ರ ಹೆಚ್ಚು ಜನಪ್ರಿಯವಾಗಿತ್ತು. ವಿಷ್ಣುವರ್ಧನ್ ಹಾಗೂ ದ್ವಾರಕೀಶ್ ಜೋಡಿ ಕಳ್ಳ-ಕುಳ್ಳ ಎಂದೇ ಪ್ರಸಿದ್ಧವಾಗಿತ್ತು. ವಿಷ್ಣುವರ್ಧನ್ ಅವರ ಅನೇಕ ಚಿತ್ರಗಳಲ್ಲಿ ದ್ವಾರಕೀಶ್ ಅವರು ತೆರೆ ಹಂಚಿಕೊಂಡಿದ್ದರು.