ಮಂಗಳೂರು: ಇತ್ತೀಚಿನ ದಿನಗಳಲ್ಲಿ ಕಳವಾದ,ಕಳೆದು ಹೋದ, ಸುಲಿಗೆಯಾದ ಮೊಬೈಲ್ ಫೋನ್ಗಳ ದುರ್ಬಳಕೆಯನ್ನು ತಡೆಗಟ್ಟಲು ಅಂತಹ ಮೊಬೈಲ್ ಫೊನ್ ಗಳನ್ನು ಬ್ಲಾಕ್ ಮಾಡುವ ನೂತನ ವ್ಯವಸ್ಥೆ CEIR Portal ಅನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಯಿಂದ
ಪರಿಣಾಮಕಾರಿಯಾಗಿ ಜಾರಿಗೆ ತರಲಾಗಿದೆ. ಅದರಂತೆ ಕಳೆದ 10 ದಿನಗಳಲ್ಲಿ ಈ ಪೋರ್ಟಲ್ ಮೂಲಕ ಜಿಲ್ಲೆಯಲ್ಲಿ ಒಟ್ಟು 110 ಕಳೆದು ಹೋದ ಮೊಬೈಲ್ ಫೋನ್ ಗಳನ್ನು ಬ್ಲಾಕ್ ಮಾಡಲಾಗಿದ್ದು, ಅವುಗಳಲ್ಲಿ
15 ಕಳೆದು ಹೋದ ಮೊಬೈಲ್ ಫೋನ್ ಗಳನ್ನು ಪತ್ತೆ ಮಾಡಿ ವಾರಸುದಾರರಿಗೆ ಹಸ್ತಾoತರಿಸಲಾಗಿರುತ್ತದೆ.
CEIR ಪೋರ್ಟಲ್ ಮೂಲಕ ಹೀಗೆ ಇನ್ನು ಹೆಚ್ಚಿನ ಕಳೆದು ಹೋಗಿರುವ ಮೊಬೈಲ್ ಫೋನ್ ಗಳನ್ನು ಪತ್ತೆ ಹಚ್ಚಿ ವಾರಸುದಾರರಿಗೆ ಹಿಂದಿರುಗಿಸಲಾಗುವುದು ಎಂದು ದ.ಕ.ಜಿಲ್ಲಾ ಪೊಲೀಸ್ ಇಲಾಖೆಯ ಪ್ರಕಟಣೆ ತಿಳಿಸಿದೆ.