ಎಡಮಂಗಲ:ಶಿಕ್ಷಣ ವ್ಯಕ್ತಿಯ ಬದುಕನ್ನು ರೂಪಿಸುವುದರೊಂದಿಗೆ ಮೌಲ್ಯಯುತ ಜೀವನವನ್ನು ನಿರ್ವಹಿಸಲು ಸಾಧ್ಯವಾಗಬೇಕು.ಆ ನಿಟ್ಟಿನಲ್ಲಿ ಶಿಕ್ಷಣ ವ್ಯವಸ್ಥೆಯ ಪರೀಕ್ಷೆ ನಿಮ್ಮ ಜೀವನದ ಅವಿಭಾಜ್ಯ ಅಂಗ ಎಂದು ವ್ಯಕ್ತಿತ್ವ ವಿಕಸನ ತರಬೇತುದಾರರಾದ ಡಾ. ಅನುರಾಧಾ ಕುರುಂಜಿ ಅಭಿಪ್ರಾಯ ಪಟ್ಟರು. ಅವರು ಸರ್ಕಾರಿ ಪ್ರೌಢಶಾಲೆ ಎಡಮಂಗಲ ಶಾಲೆಯಲ್ಲಿ

8, 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ಪರೀಕ್ಷಾ ತಯಾರಿ ಹಾಗೂ ವೃತ್ತಿ ಮಾರ್ಗದರ್ಶನ ತರಬೇತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.
ಮುಖ್ಯೋಪಾಧ್ಯಾಯರಾದ ಅಬ್ದುಲ್ ಖಾದರ್, ಶಾಲೆಯ ಹಿರಿಯ ಶಿಕ್ಷಕರಾದ ಆನಂದ ಕೆ ಎಸ್, ಸವಿತಾ, ಪದ್ಮಿನಿ, ಪೊಡಿಯ, ಪವನ ಮೊದಲಾದವರು ಉಪಸ್ಥಿತರಿದ್ದರು. ಕನ್ನಡ ಶಿಕ್ಷಕರಾದ ಸಂತೋಷ ಎಸ್ ಪಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು.