ಬಳ್ಪ:ಕಡಬ ತಾಲೂಕಿನ ಬಳ್ಪ ಗ್ರಾಮದ ಎಡೋನಿ ಎಂಬಲ್ಲಿ ರಾಜ್ಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು ರಸ್ತೆಯಲ್ಲಿ ದುರಸ್ತಿ ಕಾರ್ಯ ಆರಂಭಿಸಲಾಗಿದೆ. ಇಲ್ಲಿ ಮೋರಿ ಕಾಮಗಾರಿಯಿಂದ ಮತ್ತು ಡಾಮರು ಎದ್ದು ಹೋಗಿ ಹೊಂಡಗುಂಡಿಗಳಿಂದ ಕೂಡಿದ್ದು ಸಂಚಾರಕ್ಕೆ
ತೀವ್ರ ಅನಾನುಕೂಲ ಆಗಿರುವ ಇಲ್ಲಿವಅಪಘಾತ ಸಂಭವಿಸುತ್ತಿರುವ ಬಗ್ಗೆ ಬಳ್ಪ ಶ್ರೀ ವಿಷ್ಣು ಮೂರ್ತಿ ದೈವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ.ದೇವಿ ಪ್ರಸಾದ್ ಕಾನತ್ತೂರು ಅವರು ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಹಾಗೂ ಗುತ್ತಿಗೆ ದಾರರಿಗೆ ದೂರವಾಣಿ ಮೂಲಕ ಸಂಪರ್ಕಿಸಿ ರಸ್ತೆ ಸರಿ ಪಡಿಸುವಂತೆ ಆಗ್ರಹಿಸಿದ್ದರು. ಈ ಹಿನ್ನಲೆಯಲ್ಲಿ ದುರಸ್ತಿ ಕಾಮಗಾರಿ ಆರಂಭಿಸಲಾಗಿದೆ.














