ನವದೆಹಲಿ:ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ, ಗ್ರಾಹಕ ವ್ಯವಹಾರಗಳು,ಆಹಾರ ಮತ್ತು ನಾಗರಿಕ ಸರಬರಾಜು, ನವೀಕರಿಸಬಹುದಾದ ಇಂಧನ ಸಚಿವರಾಗಿರುವ ಪ್ರಲ್ಹಾದ್ ಜೋಶಿ ಅವರು ನೂತನ ಶಿಕ್ಷಣ ಸಚಿವರಾಗಿ ಹೆಚ್ಚುವರಿ
ಹೊಣೆ ವಹಿಸಿಕೊಂಡಿದ್ದಾರೆ.ಕರ್ತವ್ಯ ಪ್ರಜ್ಞೆ ಮತ್ತು ವಿನಮ್ರತೆಯಿಂದ ಈ ಜವಾಬ್ದಾರಿಯನ್ನು ಸ್ವೀಕರಿಸುವುದಾಗಿ ಅವರು ಹೇಳಿದ್ದಾರೆ.ಕೇಂದ್ರ ಶಿಕ್ಷಣ ಸಚಿವರಾಗಿ ಹೆಚ್ಚುವರಿ ಹೊಣೆ ವಹಿಸಿಕೊಂಡಿರುವ ಪ್ರಲ್ಹಾದ ಜೋಶಿ ಅವರು ಧಾರವಾಡ ಲೋಕಸಭಾ ಕ್ಷೇತ್ರದಿಂದ ಸತತ ಐದು ಬಾರಿ ಸಂಸದರಾಗಿ ಆಯ್ಕೆ ಆದವರು. 2024ರಿಂದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ನಾಗರಿಕ ಸರಬರಾಜು, ನವೀಕರಿಸಬಹುದಾದ ಇಂಧನ ಸಚಿವರಾಗಿದ್ದಾರೆ.








