ಮಂಗಳೂರು: ಶವ್ವಾಲ್ನ ಪ್ರಥಮ ಚಂದ್ರದರ್ಶನ ಇಂದು ಮುಸ್ಸಂಜೆ ಆಗಿರುವುದರಿಂದ ದ.ಕ.ಜಿಲ್ಲೆಯಲ್ಲಿ ನಾಳೆ( ಮಾ.20 ಶುಕ್ರವಾರ) ಈದುಲ್ ಫಿತ್ರ್ ಆಚರಿಸಲು ನಿರ್ಧರಿಸಲಾಗಿದೆ. ದ.ಕ. ಹಾಗೂ ಉಡುಪಿ ಜಿಲ್ಲೆಯಲ್ಲಿ ನಾಳೆ ಈದುಲ್ ಫಿತ್ರ್ ಆಚರಿಸಲಾಗುತ್ತದೆ.
ಚಂದ್ರದರ್ಶನ ಆಗಿರುವ ಹಿನ್ನಲೆಯಲ್ಲಿ ಕೇರಳದಲ್ಲಿಯೂ ಮಾ.20ರಂದು ಈದುಲ್ ಫಿತ್ರ್ ಆಚರಿಸಲಾಗುತ್ತದೆ ಎಂದು ವರದಿಯಾಗಿದೆ.










