ಬೆಂಗಳೂರು:ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಮುಂದುವರಿದಿದ್ದು ಬಿಜೆಪಿ 17, ಕಾಂಗ್ರೆಸ್ 9 ಹಾಗೂ ಜೆಡಿಎಸ್ 2 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ,ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ
ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಮುನ್ನಡೆ ಸಾಧಿಸಿದ್ದಾರೆ.
ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಮುನ್ನಡೆ ಸಾಧಿಸಿದ್ದಾರೆ, ಬೆಂಗಳೂರು ಉತ್ತರದಲ್ಲಿ ಶೋಭಾ ಕರಂದ್ಲಾಜೆ, ಕೊಪ್ಪಳದಲ್ಲಿ ರಾಜಶೇಖರ ಹಿಟ್ನಾಳ್ , ಬೆಂಗಳೂರು ಕೇಂದ್ರದಲ್ಲಿ ಪಿಸಿ ಮೋಹನ್ ಮುನ್ನಡೆಯಲ್ಲಿದ್ದಾರೆ.
ಬಿಜೆಪಿ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಿರುವ ಕೆ.ಎಸ್.ಈಶ್ವರಪ್ಪ ಮೂರನೇ ಸ್ಥಾನದಲ್ಲಿದ್ದರೆ, ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಮುನ್ನಡೆಯಲ್ಲಿದ್ದಾರೆ.
ಹಾಸನ ಲೋಕಸಭಾ ಕಾಂಗ್ರೆಸ್ ನ ಶ್ರೇಯಸ್ ವಿರುದ್ಧ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮುನ್ನಡೆಯಲ್ಲಿದ್ದಾರೆ. ಚಿಕ್ಕೋಡಿಯಲ್ಲಿ ಕಾಂಗ್ರೆಸ್ನ ಪ್ರಿಯಾಂಕಾ ಜಾರಕಿಹೊಳಿ, ಬೆಳಗಾವಿಯಲ್ಲಿ ಜಗದೀಶ್ ಶೇಟ್ಟರ್ ಮುನ್ನಡೆ ಪಡೆದಿದ್ದಾರೆ.ತೀವ್ರ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿರುವ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮಂಜುನಾಥ್ ಮುನ್ನಡೆ ಸಾಧಿಸಿದ್ದಾರೆ.