ಸುಳ್ಯ:ಲೋಕಸಭಾ ಚುನಾವಣೆ ಘೋಷಣೆಯಾಗಿ ನೀತಿ ಸಂಹಿತೆ ಜಾರಿಯಾಗುತ್ತಿದ್ದಂತೆ ಸುಳ್ಯ ನಗರದಲ್ಲಿ ಜಾಹೀರಾತು ಫಲಕಗಳನ್ನು ತೆರವು ಮಾಡಲು ಕಾರ್ಯಾಚರಣೆ ಆರಂಭಿಸಲಾಗಿದೆ. ಸರಕಾರದ ಹಾಹಿರಾತು ಫಲಕಗಳು ಸೇರಿ ಎಲ್ಲಾ ಫಲಕ, ಪ್ಲೆಕ್ಸ್, ಬ್ಯಾನರ್ಗಳನ್ನು ತೆರವು ಮಾಡುವ
ಕಾರ್ಯಾಚರಣೆ ಆರಂಭಿಸಲಾಗಿದೆ. ತೆರವು ಮಾಡುವುದು, ಬಣ್ಣ ಬಳಿದು, ಮುಚ್ಚುವುದು ಸೇರಿದಂತೆ ಕಾರ್ಯಾಚರಣೆ ನಡೆಸಲಾಗುತಿದೆ.ನಗರದಲ್ಲಿರುವ ಜಾಹಿರಾತು ಫಲಕಗಳನ್ನು ನಗರ ಪಂಚಾಯತ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ತೆರವು ಮಾಡುತ್ತಿದ್ದಾರೆ. ಗ್ರಾಮ ಮಟ್ಟದಲ್ಲಿ ಗ್ರಾಮ ಪಂಚಾಯತ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ತೆರವು ಮಾಡಲಿದ್ದಾರೆ. ಚುನಾವಣಾ ನೀತಿ ಸಂಹಿತೆ ಜಾರಿಯಾದ ಹಿನ್ನಲೆಯಲ್ಲಿ ನಗರ ಹಾಗೂ ಗ್ರಾಮೀಣ ಭಾಗ ಸೇರಿದಂತೆ ತಾಲೂಕಿನಾದ್ಯಂತ ಎಲ್ಲಾ ಜಾಹಿರಾತು ಫಲಕಗಳನ್ನು ತೆರವು ಮಾಡಲಾಗುತಿದೆ ಎಂದು ತಹಶೀಲ್ದಾರ್ ಜಿ.ಮಂಜುನಾಥ್ ತಿಳಿಸಿದ್ದಾರೆ.









