ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ, ಚುನಾವಣೆಗೆ ಸಂಬಂಧಿಸಿ ಕರ್ತವ್ಯ ನಿರ್ವಹಿಸುವ ಎಲ್ಲಾ ನೋಡಲ್ ಪೊಲೀಸ್ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಚುನಾವಣಾ ಕರ್ತವ್ಯಗಳಿಗೆ ಸಂಬಂಧಿಸಿದ ವಿಶೇಷ ಕಾರ್ಯಾಗಾರ ಜಿಲ್ಲಾ ಪೊಲೀಸ್

ಕಚೇರಿಯ ಸಭಾಂಗಣದಲ್ಲಿ ಆಯೋಜಿಸಲಾಯಿತು. ಕಾರ್ಯಾಗಾರದಲ್ಲಿ
ಚುನಾವಣೆಗೆ ಸಂಬಂದಿಸಿದ ಕರ್ತವ್ಯಗಳು ಹಾಗೂ ಸಿದ್ಧತೆ ಗಳ ಬಗ್ಗೆ, ಚುನಾವಣೆ ದೃಷ್ಟಿಯಿಂದ ತೆಗೆದು ಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ, ಚುನಾವಣೆಗೆ ಸಂಬಂಧಿಸಿದ ಕಾನೂನುಗಳ ಬಗ್ಗೆ, ಚುನಾವಣೆ ನೀತಿ ಸಂಹಿತೆ ಇತ್ಯಾದಿ ವಿಷಯಗಳ ಬಗ್ಗೆ ತಿಳುವಳಿಕೆಯನ್ನು ನೀಡಲಾಯಿತು. ದ.ಕ. ಜಿಲ್ಲಾ ಪೊಲೀಸ್ ಅಧೀಕ್ಷಕರಾದ ವಿಕ್ರಮ್ ಅಮಟೆ ಅವರು ತರಬೇತಿ ನೀಡಿದರು. ವೇದಿಕೆ ಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಧರ್ಮಪ್ಪ, ಬಂಟ್ವಾಳ ಉಪ ವಿಭಾಗದ
ಡಿವೈಎಸ್ಪಿ ಪ್ರತಾಪ್ ತೋರಟ್,ಡಿಸಿಆರ್ಬಿ ಡಿವೈಎಸ್ಪಿ ಡಾ.ಗಾನಾ ಪಿ. ಕುಮಾರ್, ಪುತ್ತೂರು ಉಪ ವಿಭಾಗದ ಡಿವೈಎಸ್ಪಿ
ಡಾ.ವೀರಯ್ಯ ಹಿರೇಮಠ್ ಉಪಸ್ಥಿತರಿದ್ದರು.