ಅಗರ್ತಲಾ: ತ್ರಿಪುರಾದಲ್ಲಿ ಆಡಳಿತಾರೂಢ ಬಿಜೆಪಿ ಹಾಗು ಕಾಂಗ್ರೆಸ್ ಎಡಪಕ್ಷ ಮೈತ್ರಿಕೂಟದ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದೆ.
ಬಿಜೆಪಿ ಮತ್ತು ಅದರ ಮಿತ್ರ ಪಕ್ಷ ಐಪಿಎಫ್ಟಿ (ಇಂಡಿಜಿನಿಯಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರಾ) 23 ಸ್ಥಾನಗಳಲ್ಲಿ ಸಿಪಿಎಂ-ಕಾಂಗ್ರೆಸ್ ಮೈತ್ರಿಕೂಟವೂ 23 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಮತ್ತೊಂದು ಸ್ಥಳೀಯ ಪಕ್ಷ ಟಿಪ್ರಮೋಥಾ 13 ಸ್ಥಾನಗಳಲ್ಲಿ
ಮುನ್ನಡೆಯಲ್ಲಿದೆ. ಈ ಮೂಲಕ ಬಿಜೆಪಿ ಮತ್ತು ಎಡಪಕ್ಷಗಳ ಮೈತ್ರಿಕೂಟ ಮಧ್ಯೆ ತೀವ್ರ ಪೈಪೋಟಿ ಎರ್ಪಟ್ಟಿದೆ.
ತ್ರಿಪುರಾ ರಾಜಮನೆತನಕ್ಕೆ ಸೇರಿದ ಪ್ರದ್ಯೋತ್ ಮಾಣಿಕ್ಯ ದೇಬಬರ್ಮಾ ನೇತೃತ್ವದ ಟಿಪ್ರಮೋಥಾ, ಬಿಜೆಪಿ ಮೈತ್ರಿಕೂಟ ಅಥವಾ ಕಾಂಗ್ರೆಸ್ ಮೈತ್ರಿಕೂಟದ ಜೊತೆ ಚುನಾವಣಾ ಪೂರ್ವ ಹೊಂದಾಣಿಕೆ ಮಾಡಿಕೊಂಡಿಲ್ಲ.
ನಾಗಲ್ಯಾಂಡ್ನಲ್ಲಿ ಬಿಜೆಪಿ, ಮೇಘಾಲಯದಲ್ಲಿ ಎನ್ಪಿಪಿ ಪಕ್ಷ ಮುನ್ನಡೆ ಕಾಯ್ದುಕೊಂಡಿವೆ.ನಾಗಾಲ್ಯಾಂಡ್ ರಾಜ್ಯದಲ್ಲಿ ಬಿಜೆಪಿ ಮತ್ತು ಎನ್ಡಿಪಿಪಿ ಮೈತ್ರಿಕೂಟ 42 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ, ಮೇಘಾಲಯದಲ್ಲಿ ಎನ್ಪಿಪಿ 20, ಟಿಎಂಸಿ 7, ಬಿಜೆಪಿ 7, ಕಾಂಗ್ರೆಸ್ ತಲಾ 8 ಸ್ಥಾನಗಳಲ್ಲಿ ಮುನ್ನಡೆಯುತ್ತಿವೆ.ತ್ರಿಪುರಾದ 60 ವಿಧಾನಸಭಾ ಕ್ಷೇತ್ರಗಳಿಗೆ, ನಾಗಾಲ್ಯಾಂಡ್ ಮತ್ತು ಮೇಘಾಲಯದ ತಲಾ 59 ಕ್ಷೇತ್ರಗಳಿಗೆ ವಿಧಾನಸಭೆ ಚುನಾವಣೆ ನಡೆದಿತ್ತು.