ಸುಳ್ಯ: ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಚುನಾವಣಾ ನಿರ್ವಹಣಾ ಸಮಿತಿ ಸಭೆಯು ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಅಧ್ಯಕ್ಷತೆಯಲ್ಲಿ ಸುಳ್ಯ ಬಿಜೆಪಿಯ
ಚುನಾವಣಾ ಕಚೇರಿಯಲ್ಲಿ ನಡೆಯಿತು. ಶಾಸಕಿ ಭಾಗೀರಥಿ ಮುರುಳ್ಯ, ಮಂಡಲ ಪ್ರಭಾರಿ ಜಿಲ್ಲಾ ಉಪಾಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ಉಪಸ್ಥಿತರಿದ್ದರು. ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್ ಬೆಳ್ತಂಗಡಿಯವರು ಚುನಾವಣೆ ನಿರ್ವಹಣೆ ಹಾಗೂ ಚುನಾವಣೆಯ ಸಂದರ್ಭದಲ್ಲಿ ಮಾಡಬೇಕಾಗಿರುವ ಕೆಲಸಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಆರ್ವಾರ ಸಂಘಟನಾತ್ಮಕ ವಿಷಯಗಳ ಬಗ್ಗೆ ಮಾಹಿತಿ ನೀಡಿದರು ಕ್ಷೇತ್ರದ ಚುನಾವಣಾ ಸಂಚಾಲಕ ಹರೀಶ್ ಕಂಜಿಪಿಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿಗಳಾದ ವಿನಯ ಕುಮಾರ್ ಕಂದಡ್ಕ ಸ್ವಾಗತಿಸಿ, ಪ್ರದೀಪ್ ರೈ ಮನವಳಿಕೆ ವಂದಿಸಿದರು









