ಸುಳ್ಯ: ವಿಧಾನಸಭಾ ಚುನಾವಣೆಗಾಗಿ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಬಿಗು ಭದ್ರತಾ ವ್ಯವಸ್ಥೆಯನ್ನು ಮಾಡಲಾಗಿದೆ. ಡಿವೈಎಸ್ಪಿ ಉಸ್ತುವಾರಿಯಲ್ಲಿ 4 ಮಂದಿ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ಪೊಲೀಸ್ ವ್ಯವಸ್ಥೆಯನ್ನು ನಿಯೋಜನೆ ಮಾಡಲಾಗಿದೆ.15 ಮಂದಿ ಉಪನಿರೀಕ್ಷಕರು,180 ಮಂದಿ ಪೊಲೀಸ್ ಸಿಬ್ಬಂದಿಗಳು, 120 ಮಂದಿ ಹೋಂ ಗಾರ್ಡ್ಗಳನ್ನು
ಕರ್ತುವ್ಯಕ್ಕೆ ನಿಯೋಜನೆ ಮಾಡಲಾಗಿದೆ. 4 ತುಕಡಿ ಕೇಂದ್ರೀಯ ಮೀಸಲು ಪಡೆ, ಎರಡು ತುಕಡಿ ಕೆಎಸ್ಆರ್ಪಿ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ.
ಚುನಾವಣಾ ಹಿನ್ನಲೆಯಲ್ಲಿ ಗಡಿಪ್ರದೇಶದಲ್ಲಿಯೂ ಕಟ್ಟೆಚ್ಚರ ವಹಿಸಲಾಗಿದೆ. ಚುನಾವಣೆ ಅಕ್ರಮಗಳನ್ನು ತಡೆಯುವ ಹಾಗೂ ಕಾನೂನು ಬಾಹಿರ ವಸ್ತುಗಳ ಸಾಗಟವನ್ನು ತಡೆಯುವ ಉದ್ದೇಶದಿಂದ
ಕೇರಳ ಅಂತಾರಾಜ್ಯ ಗಡಿಗಳಲ್ಲಿ ರಾಜ್ಯ ಮೀಸಲು ಪೊಲೀಸ್ ಪಡೆಯ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
ಅಂತರ ರಾಜ್ಯ ಚೆಕ್ ಪೋಸ್ಟ್ಗಳಲ್ಲಿ ಕೇರಳ ರಾಜ್ಯ ಪೊಲೀಸ್ ಹಾಗೂ ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ಸಿಬ್ಬಂದಿಗಳು ಸೇರಿ ಜಂಟಿ ಪಟ್ರೋಲಿಂಗ್ ನಡೆಸುವ ಮೂಲಕ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸಿ, ಹೆಚ್ಚಿನ ತಪಾಸಣೆ ಕೈಗೊಳ್ಳಲಾಗಿದೆ.