ಕಡಬ: ಕಡಬ ತಾಲೂಕಿನ ರೆಂಜಿಲಾಡಿ ಸಮೀಪ ಮೀನಾಡಿ ಎಂಬಲ್ಲಿ ಇಂದು ಮುಂಜಾನೆ ಆನೆ ದಾಳಿ ನಡೆಸಿದ್ದು ಯುವತಿ ಸಹಿತ ಇಬ್ಬರು ಮೃತಪಟ್ಟಿದ್ದಾರೆ. ಮೀನಾಡಿಯ ನೈಲ ರಮೇಶ್ ರೈ (55) ಹಾಗು ರೆಂಜಿತಾ (23) ಮೃತಪಟ್ಟವರು ಎಂದು ತಿಳಿದು ಬಂದಿದೆ. ಪೇರಡ್ಕ ಹಾಲು ಸೊಸೈಟಿಯಲ್ಲಿ
ಸಿಬ್ಬಂದಿಯಾಗಿರುವ ರಂಜಿತಾ ಬೆಳಗ್ಗೆ ಸೊಸೈಟಿಗೆ ಮನೆಯಿಂದ ಹೋಗುತ್ತಿದ್ದ ವೇಳೆ ಮೀನಾಡಿ ಎಂಬಲ್ಲಿ ಆನೆ ದಾಳಿ ನಡೆಸಿದೆ.
ಇದೇ ವೇಳೆ ಆಕೆಯ ಬೊಬ್ಬೆ ಕೇಳಿ ಅಲ್ಲಿಗೆ ಧಾವಿಸಿದ ಸ್ಥಳೀಯ ನಿವಾಸಿ ರಮೇಶ್ ರೈ ಎಂಬವರ ಮೇಲೆಯೂ ಆನೆ ದಾಳಿ ನಡೆಸಿದೆ. ರಮೇಶ್ ರೈ ಸ್ಥಳದಲ್ಲಿ ಮೃತಪಟ್ಟರೆ ಗಂಭೀರ ಗಾಯಗೊಂಡ ರಂಜಿತ ಅವರನ್ನು ಆಸ್ಪತ್ರೆಗೆ ಸಾಗಿಸಿದರೂ ಮೃತಪಟ್ಟರು ಎಂದು ತಿಳಿದು ಬಂದಿದೆ.