ಕಲ್ಲಪಳ್ಳಿ: ಗಡಿಪ್ರದೇಶವಾದ ಕಲ್ಲಪಳ್ಳಿಯಲ್ಲಿ ಕಾಡಾನೆ ಹಾವಳಿ ತೀವ್ರಗೊಂಡಿದ್ದು ವ್ಯಾಪಕ ಕೃಷಿ ಹಾನಿ ಮಾಡಿದೆ. ಕಲ್ಲಪಳ್ಳಿ ಆಲುಗುಂಜದ ಹರೀಶ್ ಕುಮಾರ್ ಅವರ ತೋಟಕ್ಕೆ ಕಳೆದ ರಾತ್ರಿ ನುಗ್ಗಿದ ಕಾಡಾನೆಗಳ ಹಿಂಡು ಭಾರೀ ಪ್ರಮಾಣದಲ್ಲಿ ಕೃಷಿ ಹಾನಿ ಮಾಡಿದೆ.25 ತೆಂಗಿನ ಮರ, ನೂರಕ್ಕೂ ಅಧಿಕ ಬಾಳೆ ಮತ್ತು
ಹಕವು ಅಡಿಕೆ ಮರಗಳನ್ನು ನಾಶ ಮಾಡಿದೆ. 3 ಆನೆಗಳ ಹಿಂಡು ತೋಟಕ್ಕೆ ನುಗ್ಗಿ ಕೃಷಿ ಹಾನಿ ಮಾಡಿದೆ. ಇವರ ತೋಟಕ್ಕೆ ಸೋಲಾರ್ ಬೇಲಿ ಅಳವಡಿಸಿದ್ದರೂ, ಬೇಲಿ ಇಲ್ಲದ ತೋಡಿನ ಬದಿಯ ಕಣಿಚೆಯ ಮೂಲಕ ತೋಟಕ್ಕೆ ನುಗ್ಗಿದ ಗಜಪಡೆಗಳು ತೋಟವನ್ನು ಪುಡಿಗಟ್ಟಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪರಪ್ಪ ಬ್ಲಾಕ್ ಪಂಚಾಯತ್ ಸದಸ್ಯ ಅರುಣ್ ರಂಗತ್ತಮಲೆ, ಗ್ರಾಮ ಪಂಚಾಯತ್ ಸದಸ್ಯ ರಾಧಾಕೃಷ್ಣ ಕಲ್ಲಪಳ್ಳಿ ಭೇಟಿ ನೀಡಿದ್ದಾರೆ.