ಸುಳ್ಯ:ಆನೆ ಕಾರ್ಯಪಡೆ ಮಂಜೂರು ಮಾಡಿರುವುದಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಸಂತಸ ವ್ಯಕ್ತಪಡಿಸಿದ್ದಾರೆ. ಇಲ್ಲಿನ ಆನೆ ಹಾವಳಿ ತಡೆಗಟ್ಟಲು ಕ್ರಮ ಕೈಗೊಳ್ಳುವಂತೆ ವಿಧಾನಸಭೆಯಲ್ಲಿ ಹಲವು ಬಾರಿ ಒತ್ತಾಯಿಸಿದ್ದೇವೆ. ಮುಖ್ಯಮಂತ್ರಿ ಹಾಗೂ ಅರಣ್ಯ ಸಚಿವರಿಗೆ ಮನವಿ ನೀಡಿದ್ದೇವೆ. ಇದೀಗ ಆನೆ ಕಾರ್ಯ ಪಡೆ ರಚನೆ ಮಾಡಿರುವುದರಿಂದ ಕೃಷಿಕರು ಸ್ವಲ್ಪ ಮಟ್ಟಿಗೆ ನಿಟ್ಟುಸಿರು ಬಿಡುವಂತೆ ಆಗಿದೆ ಎಂದು ಅವರು ಹೇಳಿದ್ದಾರೆ.









